Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದೃಢ ಆರ್ಥಿಕತೆಯ ನಿರ್ಮಾತೃ ಡಾ.ಮನಮೋಹನ್ ಸಿಂಗ್

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗುರುವಾರ ರಾತ್ರಿ‌ನಿಧನರಾದ ಶ್ರೇಷ್ಠ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನುಡಿನಮನ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮ ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶುಕ್ರವಾರ ನಡೆಯಿತು.


ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ‌ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಶ್ರೀ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ‌.ರಾಜೇಂದ್ರ ಮಾತನಾಡಿ, ದೇಶದ ಆರ್ಥಿಕತೆಗೆ ಚೇತರಿಕೆಯ ಚೈತನ್ಯವನ್ನು ನೀಡಿ ಪ್ರಗತಿಗೆ ಮುನ್ನುಡಿ ಬರೆದ ಮನಮೋಹನ್ ಸಿಂಗ್ ಅವರು ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ಪರಿಕಲ್ಪನೆಗಳನ್ನು ದೇಶದ ಅಭಿವೃದ್ಧಿಗೆ ಪೂರಕವಾಗಿ ಅನುಷ್ಠಾನಗೊಳಿಸಿದ್ದರು. ಅವರೊಬ್ಬ ದೂರದರ್ಶಿತ್ವವುಳ್ಳ ಚಿಂತಕರಾಗಿದ್ದರು. ಮರಣೋತ್ತರವಾಗಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಬೇಕು ಎಂದರು.

ಎಸ್.ಡಿ.ಯು.ಐ.ಎಂನ ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮನಮೋಹನ್ ಸಿಂಗ್ ಜಗತ್ತು ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು. ಅವರ ದೂರಗಾಮಿ‌ಆರ್ಥಿಕ‌ನೀತಿಗಳು ದೇಶದ ಭವಿಷ್ಯವನ್ನು ಭದ್ರಗೊಳಿಸಿವೆ. ಸಂಕಷ್ಟದ ಸಂದರ್ಭದಲ್ಲಿ ಅವರು ಈ ದೇಶಕ್ಕೆ ಕೊಟ್ಟ ಮಹತ್ವದ ಹಣಕಾಸು ನೀತಿಗಳು ಇಂದು ದೇಶವನ್ನು ಜಾಗತಿಕ ಶಕ್ತಿಯಾಗಿ ರೂಪಿಸುವಲ್ಲಿ‌ನಿರ್ಣಾಯಕ ಪಾತ್ರ ವಹಿಸಿವೆ ಎಂದರು.

ಪ್ರಧಾನಿಯಾಗಿ ಮನಮೋಹನ್ ಸಿಂಗ್ ಜಾರಿಗೆ ತಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಭಾರತದಲ್ಲಿ ಲಕ್ಷಾಂತರ ಜನರಿಗೆ ಉದ್ಯೋಗ ಸೃಷ್ಟಿಯಾಯಿತು. ಮಾಹಿತಿ ಹಕ್ಕು ಕಾಯಿದೆ ಜಾರಿಗೊಳಿಸಿದರು. ಅಮೆರಿಕಾದೊಂದಿಗೆ ಮಾಡಿಕೊಂಡ ನಾಗರಿಕ ಪರಮಾಣು ಒಪ್ಪಂದ, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನವನ್ನು ಭದ್ರಪಡಿಸಿತ್ತು. ನಿರಂತರ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಆರ್ಥಿಕ ಸ್ಥಿರತೆಯನ್ನು ಖಾತ್ರಿಪಡಿಸಿತು. ಆಧಾರ್ ಯೋಜನೆ ಜಾರಿಗೆ ಬಂದಿದ್ದೂ ಮನಮೋಹನ್ ಸಿಂಗ್ ಅವರ ಅವಧಿಯಲ್ಲೇ ಎಂಬುದು ಗಮನಾರ್ಹ ಎಂದರು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಮಾನವ ಸಂಪನ್ಮೂಲ ನಿರ್ದೇಶಕ ಪ್ರೊ.ಬಾಬುರೆಡ್ಡಿ, ಅಕಾಡೆಮಿಕ್ ಡೀನ್ ಡಾ.ಶ್ರೀನಿವಾಸರೆಡ್ಡಿ, ಎಸ್.ಡಿ.ಯು.ಐ.ಎಂ ಆಡಳಿತಾಧಿಕಾರಿ ಐ.ಎಂ.ರಮೇಶ್ ಕುಮಾರ್, ಪ್ರಾಂಶುಪಾಲ ಡಾ.ಆರ್.ನಾಗರಾಜ್, ಆರ್.ಎಲ್.ಜೆ.ಐ.ಟಿ‌ಪ್ರಾಧ್ಯಾಪಕ ಶಂಕರ್ ನುಗ್ಗೇಹಳ್ಳಿ, ಅಶೋಕ್, ವ್ಯವಸ್ಥಾಪಕ ಎಸ್.ಯತಿನ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ಪ್ರಕಾಶ್, ಗೋವಿಂದರಾಜು, ರಘು ಮತ್ತಿತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ