Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಮೇಘ ಅವರಿಗೆ ವೈದ್ಯಕೀಯ ಎಐ ಪದವಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್ ಐ) ಅರಿವಳಿಕೆ ವಿಭಾಗದ ಮುಖ್ಯಸ್ಥೆ ಡಾ. ಮೇಘ ಜಿ. ಹೆಚ್. ಅವರು ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ವೈದ್ಯಕೀಯ AI (Artificial Intelligence) ಕೋರ್ಸ್‌ನಲ್ಲಿ ಪದವಿ ಪಡೆದು ಸಾಧನೆ ಮಾಡಿದ್ದಾರೆ.

ಡಾ. ಮೇಘ ಅವರು ಪ್ರಸ್ತುತ ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಅರಿವಳಿಕೆ ತಜ್ಞೆ, ಅರಿವಳಿಕೆ ವಿಭಾಗದ ಮುಖ್ಯಸ್ಥರಾಗಿ ಹಾಗೂ ಎನ್ಎಂಸಿ (ಎನ್ಎಂಸಿ) ವಿಭಾಗದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ತಮ್ಮ ಬಿಡುವಿಲ್ಲದ ವೈದ್ಯಕೀಯ ವೃತ್ತಿಯ ನಡುವೆಯೂ ಹಗಲು-ರಾತ್ರಿ ಎನ್ನದೆ ಅಧ್ಯಯನದಲ್ಲಿ ತೊಡಗಿಸಿಕೊಂಡು ಈ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.


ಇತ್ತೀಚೆಗಷ್ಟೇ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕವಯಿತ್ರಿಯಾಗಿ ಪಾದಾರ್ಪಣೆ ಮಾಡಿರುವ ಇವರು, ಈಗ ತಾಂತ್ರಿಕ ಕ್ಷೇತ್ರದಲ್ಲೂ ಮಹತ್ತರ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಎಐ ತಂತ್ರಜ್ಞಾನವು ರೋಗಗಳನ್ನು ಪತ್ತೆ ಹಚ್ಚುವಲ್ಲಿ ವಿನೂತನ ಮತ್ತು ಬಹುರೂಪದ ಸಹಾಯವನ್ನು ನೀಡುತ್ತದೆ. ಅಮೇರಿಕಾ ಮತ್ತು ಇಂಗ್ಲೆಂಡ್‌ನಂತಹ ಮುಂದುವರಿದ ದೇಶಗಳಲ್ಲಿ ಲಭ್ಯವಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಭಾರತದಲ್ಲೂ ಅನುಷ್ಠಾನಗೊಳಿಸಲು ಈ ತಂತ್ರಜ್ಞಾನ ಸಹಕಾರಿ. ಎಐ ಬಳಕೆಯಿಂದ ದತ್ತಾಂಶ ನಮೂದು ಮತ್ತು ವಿಶ್ಲೇಷಣೆಯ ಮೂಲಕ ಭವಿಷ್ಯದಲ್ಲಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಸಾಧ್ಯವಿದೆ. ಆರೋಗ್ಯ ಸೇವೆಗಳನ್ನು ಕಡಿಮೆ ವೆಚ್ಚದಲ್ಲಿ ಜನರಿಗೆ ತಲುಪಿಸಬಹುದಾಗಿದೆ. ಇದು ಮುಂದಿನ ಪೀಳಿಗೆಯ ವೈದ್ಯರಿಗೆ ಆರೋಗ್ಯ ಸೇವೆಯಲ್ಲಿ ಮಹತ್ತರ ಪಾತ್ರ ವಹಿಸಲು ಇನ್ಫಾರ್ಮೇಟಿವ್ ಆಗಿ ಕೆಲಸ ಮಾಡುತ್ತದೆ. ಇಂತಹ ತಂತ್ರಜ್ಞಾನದಲ್ಲಿ ಈಗ ಡಾ. ಮೇಘಾ ನೈಪುಣ್ಯತೆ ಗಳಿಸಿದ್ದಾರೆ.

ಡಾ. ಮೇಘ ಅವರ ಈ ಸಾಧನೆಯು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಹೆಚ್ಚಿನ ಕೀರ್ತಿಯನ್ನು ತಂದಿದೆ. ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಬಿ. ವೈ. ಯುವರಾಜ್ ಅವರು ಡಾ. ಮೇಘ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಇವರ ಸಾಧನೆಯನ್ನು ಶ್ಲಾಘಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ