Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ತೆ ಕಾಟಕ್ಕೆ ಬೇಸತ್ತು ಅತ್ತೆಯನ್ನ ತುಂಡು ತುಂಡಾಗಿ ಕತ್ತರಿಸಿದ ಅಳಿಯ ಡಾ.ರಾಮಚಂದ್ರಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಕೊರಟಗೆರೆ:
ಮಹಿಳೆಯ ದೇಹವನ್ನು ತುಂಡು ತುಂಡುಗಳಾಗಿ ಕತ್ತರಿಸಿದ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಲಕ್ಷ್ಮಿದೇವಮ್ಮ(42) ಕೊಲೆಯಾದ ಮಹಿಳೆ ಎನ್ನಲಾಗಿದೆ. ಅಳಿಯ ದಂತ ವೈದ್ಯ ಡಾ.ರಾಮಚಂದ್ರಯ್ಯ, ಸತೀಶ್ ಮತ್ತು ಕಿರಣ್ ಬಂಧಿತ ಆರೋಪಿಗಳಾಗಿದ್ದಾರೆ. ಅತ್ತೆ ಕಾಟಕ್ಕೆ ಬೇಸತ್ತು ಅಳಿಯನಿಂದಲೇ ಕೃತ್ಯವೆಸಗಲಾಗಿದೆ. ಕೊರಟಗೆರೆ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


ಅತ್ತೆ ಕೊಲೆ ಮಾಡಿದ ಅಳಿಯ-
ತನ್ನ ಪತ್ನಿ ಲಕ್ಷ್ಮಿದೇವಿ ಕಾಣೆಯಾಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ಆಕೆಯ ಪತಿ ಬಸವರಾಜ್ ಎಂಬುವರು ಆಗಸ್ಟ್
3ರಂದು ಮಧ್ಯಾಹ್ನ ಬೆಳ್ಳಾವಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು.


ಲಕ್ಷ್ಮೀದೇವಿಯು ತನ್ನ ಮಗಳಾದ ತೇಜಸ್ವಿ ನೋಡಿಕೊಂಡು ಬರುವುದಾಗಿ ಹೇಳಿ ಹೋದವರು ರಾತ್ರಿಯಾದರೂ ಮನೆಗೆ ವಾಪಸ್ ಬರದೆ ಕಾಣೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.


ದೂರು ನೀಡಿದ ಬಳಿಕ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದ ಘಟನೆ ನಡೆದಿದ್ದು, ಇದರ ಜಾಡು ಹಿಡಿದ ಪೊಲೀಸರು ಮೃತ ಮಹಿಳೆಯನ್ನು 42 ವರ್ಷದ ಲಕ್ಷ್ಮೀದೇವಮ್ಮ ಎಂದು ಗುರುತಿಸಿದ್ದರು.

ಕೈಕಾಲು ಒಂದು ಕಡೆ, ಹೃದಯದ ಭಾಗ ಮತ್ತೊಂದು ಕಡೆ, ಹೊಟ್ಟೆ, ಕರುಳಿನ ಭಾಗ ಇನ್ನೊಂದು ಕಡೆ, ತಲೆಬುರುಡೆ ಮತ್ತು ಮುಖವನ್ನು ಜಜ್ಜಿ ವಿರೂಪಗೊಳಿಸಿ ರಸ್ತೆಯ ಪಕ್ಕದಲ್ಲಿ ದುಷ್ಕರ್ಮಿಗಳು ಎಸೆದು ಹೋಗಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 19 ಸ್ಥಳಗಳಲ್ಲಿ ಬಿದ್ದಿದ್ದ ಮೃತ ದೇಹದ ಅಂಗಾಂಗಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದರು. ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರಿನ ಚಲನವಲನವನ್ನು ಸ್ಥಳೀಯರು ಗಮನಿಸಿದ್ದರು. ಸಿಸಿಟಿವಿಯಲ್ಲಿಯೂ ಕಾರಿನ ಚಲನವಲನ ದಾಖಲಾಗಿತ್ತು. ಕಾರಿನ ನಂಬರ್ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ.


1 ಆರೋಪಿ ಮೃತ ಮಹಿಳೆಯ ಅಳಿಯ ಡಾ.ರಾಮಚಂದ್ರಯ್ಯ ತುಮಕೂರು ನಗರದ ಪ್ರತಿಷ್ಠಿತ ದಂತ ವೈದ್ಯನಾಗಿ ಕೆಲಸ ಮಾಡುತ್ತಿದ್ದರು. ಅಳಿಯ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ