Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಎತ್ತಿ ಹಿಡಿಯಲು ಶ್ರಮಿಸಿ- ಡಾ.ರಂಗಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾಮಾಜಿಕ ನ್ಯಾಯ ಮತ್ತು ಸಮಾನತೆ ಎತ್ತಿ ಹಿಡಿಯಲು ಶ್ರಮಿಸುವಂತೆ ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಸಲಹೆ ನೀಡಿದರು.


ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಗಳ ಪ್ರಾಯೋಜಕತ್ವದಲ್ಲಿ ಜಿಲ್ಲಾ ತರಬೇತಿ ಸಂಸ್ಥೆ ಹಾಗೂ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ವತಿಯಿಂದ, ಇತ್ತೀಚೆಗೆ ನಗರದ ಜಿ.ಪಂ.ಸಭಾAಗಣದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ನ್ಯಾಯ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾಧಿಸಲು ಸರ್ಕಾರ ಜಾರಿಗೊಳಿಸಿರುವ ಕಾನೂನು ಹಾಗೂ ಕಾಯ್ದೆಗಳ ಕುರಿತು ಅಧಿಕಾರಿಗಳು ಅರಿವು ಹೊಂದಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯುರು, ವಿಶೇಷ ಚೇತನರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಇರುವ ಕಾಯ್ದೆ, ಕಾನೂನು, ನೀತಿಗಳ ಅರಿವು ಹಾಗೂ ಬಳಕೆ ಬಗ್ಗೆ ತರಬೇತಿಯಲ್ಲಿ ತಿಳುವಳಿಕೆ ನೀಡಲಾಗುವುದು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಷ್ಠಾನ ಮಾಡುತ್ತಿರುವ ಯೋಜನೆಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯೆ ಪಿ.ವಿ.ಸವಿತಾ ಸಂವಿಧಾನ ಪೀಠಿಕೆಯನ್ನು ಅಧಿಕಾರಿಗಳಿಗೆ ಬೋಧಿಸಿದರು.

ಸುಸ್ಥಿರ ಸಮಾಜ: ಸಾಮಾಜಿಕ ನ್ಯಾಯದ ಮಹತ್ವ ಮತ್ತು ಪರಿಕಲ್ಪನೆ, ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ ಮತ್ತು ನಿಯಮಗಳ ಕುರಿತು ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಕಿರಿಯ ಬೋಧಕ ಡಾ.ಸಚಿನ್.ಬಿ.ಎಸ್. ತರಬೇತಿ ನೀಡಿದರು.

ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ದಿನಕರ್.ಪಿ.ಕೆ ದೌರ್ಜನ್ಯ ತಡೆ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು. ಸಹಾಯ ನಿರ್ದೇಶಕ ಗೋಪಾಲಪ್ಪ.ಎನ್ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಕುರಿತು ತಿಳಿಸಿಕೊಟ್ಟರು.


ತರಬೇತಿಯಲ್ಲಿ ಅಧಿಕಾರಿಗಳಿಗೆ ಪರಿಕ್ಷೆ ಪೂರ್ವ ತರಬೇತಿ, ಹಿಮ್ಮಾಹಿತಿ, ರಸಪ್ರಶ್ನೆ, ವಿಷಯ ಮಂಡನೆ, ಗುಂಪು ಚರ್ಚೆ ಹಾಗೂ ವಿಶೇಷ ಪ್ರಕರಣಗಳ ಕುರಿತು ಅಧ್ಯಯನ ಕಾರ್ಯಕ್ರಮಗಳು ನಡೆದವು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ