Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕನಸು ನನಸಾಗಲು ಶ್ರಮ ಅಗತ್ಯ- ಜಿ.ಪಂ ಸಿಇಒ ಡಾ.ಎಸ್.ಆಕಾಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಂದಿನ ಮಕ್ಕಳು ಕಾಣುವ ಕನಸು ನನಸಾಗಲು ಶ್ರಮಪಡುವುದು ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಹೇಳಿದರು.


ನಗರದ ಕವಾಡಿಗರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜರುಗಿದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆಯನ್ನು ಜವಾಹರಲಾಲ್ ನೆಹರೂ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.


ಪೋಷಕರು ತಮ್ಮ ಮಗುವಿನ ಬಾಲ್ಯದಲ್ಲಿ ಉತ್ತೇಜಿಸುವ ಕಾರ್ಯಗಳು ಮಗುವಿನ ಮನಸ್ಸಿನ ಮೇಲೆ ಪ್ರಭಾವಬೀರಿ, ಮುಂದಿನ ಸಾಧನೆಗೆ ದಾರಿ ದೀಪವಾಗುತ್ತವೆ.  ಪೋಷಕರು ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸೂಕ್ತವಾದ ದಾರಿಗಳನ್ನು ಕಂಡುಕೊಳ್ಳಬೇಕು. ಮಗುವನ್ನು ಶಾಲೆಗೆ ದಾಖಲು ಮಾಡಿದ ನಂತರ ಪ್ರತಿ ತಿಂಗಳೂ ಜರುಗುವ ಮಾಸಿಕ ಸಭೆಯಲ್ಲಿ ಬೋಧನೆ ಹಾಗೂ ಕಲಿಕೆಯ ಕುರಿತು ಚರ್ಚಿಸಿ, ಸೂಕ್ತ ಮಾಹಿತಿಗಳನ್ನು ನೀಡಿದಲ್ಲಿ ಶಾಲೆಯಲ್ಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತಮಪಡಿಸಲು ಸೂಕ್ತ ವೇದಿಕೆಯಾಗುವುದು ಎಂದು ತಿಳಿಸಿದರು.


      ಸರ್ಕಾರ ಹಾಗೂ ಇಲಾಖೆಯಿಂದ ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ, ಉಚಿತ ಮಧ್ಯಾಹ್ನ ಬಿಸಿಯೂಟ ಯೋಜನೆ, ಉಚಿತ ವಿದ್ಯಾರ್ಥಿವೇತನ, ಪೂರಕ ಪೌಷ್ಟಿಕ ಆಹಾರದಂಥ ಕಾರ್ಯಕ್ರಮಗಳ ಹಮ್ಮಿಕೊಂಡು ಮಕ್ಕಳ ದೈಹಿಕ ಹಾಗೂ ಆರೋಗ್ಯ ಬೆಳವಣಿಗೆಗೆ ಸಹಾಯ ಮಾಡುತ್ತಿದೆ.

ಇವಲ್ಲದೆ ಭೌತಿಕ ಸೌಲಭ್ಯ ಉತ್ತಮಪಡಿಸಿಕೊಳ್ಳಬೇಕಾದರೆ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕು ಹಾಗೂ ಪ್ರತಿನಿತ್ಯ ಶಾಲೆಗೆ ಕಳುಹಿಸಿಕೊಡುವುದು ಪ್ರಮುಖವಾಗಿದೆ ಎಂದು ಹೇಳಿದರು.


      ಮಕ್ಕಳ ಕಲಿಕೆಯನ್ನು ಮೌಲ್ಯಮಾಪನ ಮಾಡಬೇಕೆಂದರೆ, ಶಾಲೆಯಲ್ಲಿ ಜರುಗುವ ಚಟುವಟಿಕೆಗಳನ್ನು ಮಕ್ಕಳು ಪ್ರತಿನಿತ್ಯ ಪೋಷಕರಲ್ಲಿ ಹೇಳಿಕೊಳ್ಳುತ್ತವೆ. ಅವುಗಳನ್ನು ಪುರಸ್ಕರಿಸುತ್ತಾ, ಶೈಕ್ಷಣಿಕ ಕಲಿಕೆಗೆ ಅಗತ್ಯವಾದ ಅಂಶಗಳನ್ನು ಶಾಲಾ ಶಿಕ್ಷಕರೊಂದಿಗೆ ಹಂಚಿಕೊಳ್ಳಬೇಕು.

ಪ್ರತಿ ತಿಂಗಳೂ ಜರುಗುವ ಎಸ್.ಡಿ.ಎಂ.ಸಿ ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಚರ್ಚೆ ಆಗಬೇಕು ಹಾಗೂ ಶಾಲಾಭಿವೃದ್ಧಿಗೆ ಪೋಷಕರು ಸಹಕರಿಸಬೇಕು ಎಂದು ತಿಳಿಸಿದ ಅವರು, ಶೇ.100 ಹಾಜರಾತಿ ಇರುವಂತೆ  ಶಿಕ್ಷಕರು ಕ್ರಮವಹಿಸಬೇಕು ಮಕ್ಕಳ ಕಲಿಕೆಯನ್ನು ಉತ್ತಮಪಡಿಸಬೇಕು ಎಂದು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಕವಾಡಿಗರ ಹಟ್ಟಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್. ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಆರ್.ಮಂಜುನಾಥ್, ನಾಸಿರುದ್ಧಿನ್, ಡಿವೈಪಿಸಿ ವೆಂಕಟೇಶಪ್ಪ, ಡಯಟ್ ಹಿರಿಯ ಉಪನ್ಯಾಸಕರಾದ ಎಸ್.ನಾಗಭೂಷಣ್, ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಾ, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‍ಕುಮಾರ್. ಗ್ರಾಮ ಪಂಚಾಯಿತಿ ಸದಸ್ಯ ಎನ್.ಪ್ರಭು, ಶಾಲಾ ಮುಖ್ಯ ಶಿಕ್ಷಕ ರುದ್ರಮುನಿ ಇದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು