Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್​ ಸಿಬ್ಬಂದಿ ಮೇಲೆ ಲಾರಿ ಹತ್ತಿಸಿದ ಚಾಲಕ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಲಾರಿಯನ್ನು ನಿಲುಗಡೆ ಮಾಡುವಂತೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ನೀಡಿದ ಸೂಚನೆ ನಿರ್ಲಕ್ಷಿಸಿ ಲಾರಿ ನಿಲ್ಲಿಸಲು ಪೊಲೀಸ್​ ಸಿಬ್ಬಂದಿ ಮೇಲೆ ಚಾಲಕ ಲಾರಿ ಹತ್ತಿಸಿದ ಪರಿಣಾಮ ಪೊಲೀಸ್​ ಕಾನ್ಸ್​ಟೇಬಲ್​ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್​ ಗೇಟ್​ ಬಳಿ ಜರುಗಿದೆ.


ದಾವಣಗೆರೆಯ ಡಿಎಆರ್​ ವಿಭಾಗದ ಪೊಲೀಸ್ ರಾಮಪ್ಪ ಪೂಜಾರ್ ದಾರುಣವಾಗಿ ಸಾವನ್ನಪ್ಪಿದ ಸಿಬ್ಬಂದಿ.
ಹೆಬ್ಬಾಳ ಟೋಲ್ ಗೇಟ್ ಬಳಿ ಡಿಎಆರ್ ಪೊಲೀಸ್​​ ಕಾನ್ಸ್​ಟೇಬಲ್ ರಾಮಪ್ಪ ಪೂಜಾರ್ ಸಂಚಾರಿ ಪೊಲೀಸರೊಂದಿಗೆ ಲಾರಿ ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ
, ಅತಿ ವೇಗದಲ್ಲಿ ಇದ್ದ ಲಾರಿ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ, ಚಾಲಕನನ್ನು ಹಿಡಿಯವ ಪ್ರಯತ್ನ ನಡೆಸಲಾಯಿತಾದರೂ ಆತ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಐಜಿಪಿ ಹಾಗೂ ಎಸ್ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಟೋಲ್ ಗೇಟ್ ಬಳಿ ಯಾವುದೇ ಸಿಸಿಟಿವಿ ಕ್ಯಾಮರಾ ಅಳವಡಿಸದೇ ಇರುವ ಹಿನ್ನಲೆ ಎಸ್ಪಿ ಅಲ್ಲಿನ ಟೋಲ್​ ಆಡಳಿತ ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಕೂಡ ಜರುಗಿದೆ.

ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಮೃತರ ದೇಹ ಇಡಲಾಗಿದ್ದು, ಸ್ಥಳಕ್ಕೆ ಐಜಿಪಿ ರವಿಕಾಂತೇ ಗೌಡ ಅವರು ಭೇಟಿ ನೀಡಿದರು. ಮೃತ ಪೊಲೀಸ್​​ ಸಿಬ್ಬಂದಿಯ ಕುಟುಂಬಕ್ಕೆ ಧೈರ್ಯ ನೀಡಿ ಸಾಂತ್ವನ ಹೇಳಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಸದೆ ಇರುವುದರಿಂದ ಸಮಸ್ಯೆ ಆಗಿದೆ. ಈ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಎಸ್ಪಿ ಉಮಾಪ್ರಶಾಂತ್ ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ