Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಚಾಲನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಘಟಕದ ಎರಡು ವಾಹನಗಳಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಸಂಚಾರಿ ಆರೋಗ್ಯ ಕ್ಲಿನಿಕ್ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಿದ್ದು, ನಿಟ್ಟಿನಲ್ಲಿ ಜಿಲ್ಲೆಯ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೆ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸುವುದು, ಚಿಕಿತ್ಸೆ ಹಾಗೂ ಸಲಹೆ ಸೇರಿದಂತೆ ಮೊದಲಾದ ಸೇವೆ ಒದಗಿಸಲು ಸಂಚಾರಿ ಆರೋಗ್ಯ ಕ್ಲಿನಿಕ್ಗಳು ಕಾರ್ಯಾರಂಭಗೊಂಡಿದ್ದು, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಅವರ ಅವಲಂಬಿತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ಅಧಿಕಾರಿ ಅನಿಲ ಬಾಲಚಂದ್ರ ಬಗಟಿ ಮಾತನಾಡಿ, ಎರಡು ತಾಲ್ಲೂಕುಗಳಿಗೆ ಒಂದರಂತೆ ಜಿಲ್ಲೆಗೆ ಮೂರು ಸಂಚಾರಿ ಆರೋಗ್ಯ ಘಟಕ ವಾಹನಗಳು ಮಂಜೂರಾಗಿದ್ದು, ಸದ್ಯದ ಮಟ್ಟಿಗೆ ಎರಡು ವಾಹನಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.

ಸಂಚಾರಿ ಆರೋಗ್ಯ ಘಟಕವು ರೂಟ್ ಮ್ಯಾಪ್ನಂತೆ ನಿಗಧಿತ ಸ್ಥಳಗಳಲ್ಲಿ ಕನಿಷ್ಟ 4 ಗಂಟೆ ಕಾರ್ಯನಿರ್ವಹಿಸಲಿದೆ. ಸಂಚಾರಿ ಆರೋಗ್ಯ ಘಟಕದಲ್ಲಿ ವೈದ್ಯರು ಒಳಗೊಂಡಂತೆ, ಒಟ್ಟು ಆರು ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಘಟಕದಲ್ಲಿ ವೈದ್ಯಕೀಯ ಉಪಕರಣಗಳು, ಪ್ರಯೋಗಾಲಯಗಳು ಹಾಗೂ ವೈದ್ಯಕೀಯ ಬಳಕೆಯ ವಸ್ತುಗಳು ಲಭ್ಯವಿವೆ ಎಂದು ತಿಳಿಸಿದರು.

ಸಂದರ್ಭದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕಾರ್ಮಿಕ ನಿರೀಕ್ಷಕರಾದ ರಾಜಣ್ಣ, ಕುಸುಮ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ