Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಲ್ ಬಾಕಿ, ಭದ್ರಾ ಕಾಮಗಾರಿ ಸಂಪೂರ್ಣ ಸ್ಥಗಿತ-ಹೋರಾಟ ಸಮಿತಿ ಆತಂಕ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ
ಹಾಗೂ ಕೇಂದ್ರ ಸರ್ಕಾರಗಳ ನಿಸ್ಸೀಮ ನಿರ್ಲಕ್ಷ್ಯದಿಂದಾಗಿ ಭದ್ರಾ ಮೇಲ್ದಂಡೆ ಕಾಮಗಾರಿ ಆಮೆ ವೇಗ ಪಡೆದಿದೆ. ಅನುದಾನ ಕೊರತೆ ಕಾರಣಕ್ಕೆ ಗುತ್ತಿಗೆದಾರರ ಬಿಲ್ ಬಾಕಿ ಇದ್ದು ಕಾಮಗಾರಿ ಸ್ಥಗಿತಗೊಂಡಿದ್ದು ಗುತ್ತಿಗೆದಾರರು ಫೀಲ್ಡ್ ನಿಂದ ಹೊರ ಹೋಗಿದ್ದಾರೆ ಎಂದು ಚಿಂತಕ, ನೀರಾವರಿ ಹೋರಾಟ ಸಮಿತಿ ಮುಖ್ಯಸ್ಥ ಜೆ.ಯಾದವರೆಡ್ಡಿ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಪತ್ರಕರ್ತರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಗುತ್ತಿಗೆದಾರರು ತಮ್ಮ ಯಂತ್ರೋಪಕರಣಗಳೊಂದಿಗೆ ಕಾಮಗಾರಿ ಸ್ಥಳದಿಂದ ಖಾಲಿ ಮಾಡಿದ್ದಾರೆ. ರಾಜ್ಯದ ಬೇರೆ ಬೇರೆ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಆದರೆ ಭದ್ರಾ ಮೇಲ್ದಂಡೆ ಯೋಜನೆ ಆರಂಭವಾಗಿ 23 ವರ್ಷಗಳು ಕಳೆದಿದ್ದರೂ ಆಮೆ ಗತಿಯಿಂದ ನಡೆಯುತ್ತಿದೆ. 2300 ಕೋಟಿಯಷ್ಟು  ಬೃಹತ್ ಮೊತ್ತದ ಕಾಮಗಾರಿ ಬಿಲ್ ಬಾಕಿ ಇರುವುದರಿಂದ ತುಮಕೂರು ಬ್ರಾಂಚ್ ಕಾಲುವೆ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಸ್ಥಗಿತಗೊಂಡಿದ್ದು ಮೆಷನರಿ ಸಮೇತ ಗುತ್ತಿಗೆದಾರರು ಕಾಲ್ಕಿತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.  

ಅನುದಾನ ಅಲಭ್ಯತೆ ಕಾರಣಕ್ಕೆ ಯೋಜನೆಯ ಇಂಜಿನಿಯರ್ ಗಳು ನಿತ್ಯ ಕಚೇರಿಗೆ ಬಂದು ಕೈ ಕಟ್ಟಿ ಕುಳಿತು ಮನೆಗಳಿಗೆ ವಾಪಾಸ್ಸಾಗುತ್ತಿದ್ದಾರೆ. ಒಂದರ್ಥದಲ್ಲಿ ಕಚೇರಿ ಕಾಯುವ ವಾಚ್ ಮನ್ ಕೆಲಸ ಅವರದ್ದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸರ್ಕಾರ 5300 ಕೋಟಿ ರೂ.ಗಳನ್ನು ಸಕಾಲದಲ್ಲಿ ಹಣ ಒದಗಿಸಿದ್ದರೆ ಇಷ್ಟೊತ್ತಿಗೆ ವಿವಿ ಸಾಗರದ ಜೊತೆಗೆ ಜಿಲ್ಲೆಯ ನೂರಾರು ಕೆರೆಗಳು ಭರ್ತಿಯಾಗುವ ಭಾಗ್ಯ ಪಡೆದುಕೊಳ್ಳುತ್ತಿದ್ದವು ಆದರೆ ಅದು ಸಾಧ್ಯವಾಗಿಲ್ಲದಿರುವುದಕ್ಕೆ ಅನುದಾನ ಕೊರತೆ ಕಾರಣವಾಗಿದೆ ಎಂದು ಯಾದವರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

     ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಮೂರು ಪರಿಶಿಷ್ಟ ಪಂಗಡದ , ಎರಡು ಪರಿಶಿಷ್ಟ ಜಾತಿಗೆ ಮೀಸಲಾದ ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಸಾಲದೆಂಬಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಕೂಡಾ ಪರಿಶಿಷ್ಟ ಜಾತಿಗೆ ಮೀಸಲು ಆಗಿದೆ. ಶೋಷಿತ ಸಮುದಾಯ ಹಾಗೂ ಅಹಿಂದ ವರ್ಗ ಪ್ರತಿನಿಧಿಸುವುದಾಗಿ ಹೇಳುವ ಸಿಎಂ ಸಿದ್ದರಾಮಯ್ಯ ಶೋಷಿತರೇ ಹೆಚ್ಚು ಒಳಗೊಂಡಿರುವ ಮಧ್ಯ ಕರ್ನಾಟಕ ಪ್ರದೇಶದ ನೀರಾವರಿ ಯೋಜನೆ ನಿರ್ಲಕ್ಷ್ಯ ಮಾಡಿರುವುದು ನೋವು ತಂದಿದೆ. ಸಿದ್ದರಾಮಯ್ಯ ಅವರ ಬದ್ದತೆ ಪ್ರಶ್ನಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

     ಕೇಂದ್ರ ಸರ್ಕಾರ  ಘೋಷಿಸಿದ 5300 ಕೋಟಿ ರೂ ಅನುದಾನ ನೀಡಿಲ್ಲವೆಂಬ ಸಂಗತಿಯ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಭದ್ರಾ  ಮೇಲ್ದಂಡೆಗೆ ಅನುದಾನ ವ್ಯಯ ಮಾಡಲು ಮುಂದಾಗುತ್ತಿಲ್ಲ. ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳಿಕೊಂಡು ಯೋಜನೆ ಸೊರಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ದ್ರೋಹಿ ನಡೆಯನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಖಂಡಿಸುತ್ತದೆ ಎಂದು ಯಾದವರೆಡ್ಡಿ ಹರಿಹಾಯ್ದರು.

    ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಶಾಸಕರ ಬಹುದೊಡ್ಡ ದಂಡೇ ಇದೆ. ಎಲ್ಲರೂ ಕೂಡಾ ಕಾಮಗಾರಿ ವಿಷಯದಲ್ಲಿ ಇಚ್ಚಾಶಕ್ತಿ ತೋರದೆ ಅಸಹಾಯಕರಾಗಿ ಪಲಾಯನವಾದ  ಅನುಸರಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸುವ ಬದ್ದತೆ ಪ್ರದರ್ಶಿಸಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಭದ್ರಾ ನೀರನ್ನು ಲಿಫ್ಟ್ ಮಾಡಿ ವಿವಿ ಸಾಗರ ಜಲಾಶಯ ಭರ್ತಿ ಮಾಡುವ ಹಾಗೂ ಮುಖ್ಯಮಂತ್ರಿಗಳ ಕರೆಯಿಸಿ ಬಾಗಿನ ಬಿಡುವ ಸಂಭ್ರಮದಲ್ಲಿ ಮುಳುಗಿರುವುದು ಪ್ರಜಾಪ್ರಭುತ್ವದ ದೊಡ್ಡ ಅಣಕವಾಗಿದೆ ಎಂದು ಸಮಿತಿ ಸದಸ್ಯರು ಆರೋಪಿಸಿದರು.

      ಗ್ಯಾರಂಟಿ  ಯೋಜನೆಗಳ ಮೂಲಕ ಅಹಿಂದ ವರ್ಗಗಳಲ್ಲಿ ಅಶಾಕಿರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಏಳನೇ ಗ್ಯಾರಂಟಿಯಾಗಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸುವ ಶಪಥ ಮಾಡಲಿ. 22 ಸಾವಿರ ಕೋಟಿ ರುಪಾಯಿ ವೆಚ್ಚದ ಭದ್ರಾ ಮೇಲ್ದಂಡೆಗೆ ರಾಜ್ಯ ಸರ್ಕಾರ ಇದುವರೆಗೂ 10300 ಕೋಟಿ ರುಪಾಯಿ ವ್ಯಯ ಮಾಡಿದೆ. ಇನ್ನೂ 12 ಸಾವಿರ ಕೋಟಿ ರುಪಾಯಿಯಷ್ಟು ಅನುದಾನ ಕಾಮಗಾರಿ ಪೂರ್ಣಗೊಳಿಸಲು ಬೇಕಾಗಿದೆ.

    ವಿವಿ ಸಾಗರ ಜಲಾಶಯಕ್ಕೆ ಬಾಗಿನ ಬಿಡಲು ಬರುತ್ತಿರುವ ಸಿಎಂ ಸಿದ್ದರಾಮಯ್ಯ ಮೊರದಲ್ಲಿ ಹೆಚ್ಚು ಅನುದಾನ ಪೂರೈಕೆ ಹಾಗೂ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ನಿಜದನಿಯ ಇಚ್ಚಾಶಕ್ತಿಯನ್ನಿಟ್ಟು ಜಲಾರ್ಪಣೆ ಮಾಡಲಿ. ನಮ್ಮನ್ನು ಪೊರೆವ ತಾಯಿ ತುಂಗೆ, ಭದ್ರೆ, ವೇದಾವತಿ ಮಡಿಲಲ್ಲಿ ನಿಂತು ಪೊಳ್ಳುತನ, ಹುಸಿ ಭರವಸೆ ಬಾಗಿನ ಬಿಡುವ ಪ್ರದರ್ಶನ ಮಾಡಬಾರದೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ.

ಸುದ್ದಿ ಗೋಷ್ಠಿಯಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಿಪಿಐ ಸುರೇಶ್ ಬಾಬು, ಬಸ್ತಿಹಳ್ಳಿ ಸುರೇಶ್ ಬಾಬುಹಂಪಯ್ಯನಮಾಳಿಗೆ ಧನಂಜಯ, ಮಲ್ಲಾಪುರ ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಚಿಕ್ಕಪ್ಪನಹಳ್ಳಿ ಷಣ್ಮುಖ ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ