ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 2026-27ನೇ ಸಾಲಿಗೆ ದಸರಾ ಕ್ರೀಡಾ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗೆ ಆಯೋಜಿಸ ಲಾಗುತ್ತಿದ್ದು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸೆಪ್ಟೆಂಬರ್ 04 ರಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳು ಆರಂಭವಾಗಲಿದ್ದು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 04 ಮತ್ತು 05 ರಂದು ದೊಡ್ಡಬಳ್ಳಾಪುರ ಟೌನಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ನೆಲಮಂಗಲ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ನೆಲಮಂಗಲ ಟೌನ್ ನ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹೊಸಕೋಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 12 ರಿಂದ 13 ರವರೆಗೆ ಹೊಸಕೋಟೆ ಟೌನ್ ನ ಚನ್ನ ಬೈರೇಗೌಡ ಕ್ರೀಡಾಂಗಣದಲ್ಲಿ ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 16 ರಿಂದ 17 ವರೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಸಲಾಗುವುದು.
ತಾಲ್ಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಪುಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಮತ್ತು ಯೋಗಾಸನ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಪುಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಯೋಗಾಸನ, ಬಾಸ್ಕೆಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್ ಮತ್ತು ನೆಟ್ ಬಾಲ್ ಅನ್ನು ಸ್ಪರ್ಧೆ ಏರ್ಪಡಿಸಲಾಗುವುದು. ಜೊತೆಗೆ ಟೆನ್ನಿಸ್, ಈಜು, ಟೇಕ್ವಾಂಡೋ, ಜುಡೋ, ವುಷು,ಕರಾಟೆ ಕ್ರೀಡೆಯನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಿಕೊಳ್ಳಬಹುದು.
ಜಿಲ್ಲೆಯ ಅರ್ಹ, ಆಸಕ್ತ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಬಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಆನ್ಲೈನ್ ಲಿಂಕ್ https://dasaracmcup.in ಮೂಲಕ ನೋಂದಣಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊ.ಸಂ 9845608598, 9632778567 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




