Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು‌:
ವಕೀಲೆ ಎಸ್.ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿಯ ಡಿವೈಎಸ್‌ಪಿ ಕನಕಲಕ್ಷ್ಮಿ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.


ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಕೆ ಮಾಡುತ್ತಿದ್ದ ವಕೀಲೆ ಎಸ್.ಜೀವಾ ಕಳೆದ ನವೆಂಬರ್-22 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ವಕೀಲೆ ಜೀವಾ ಡೆತ್ ನೋಟ್ ಬರೆದಿಟ್ಟು ಬನಶಂಕರಿಯ ರಾಘವೇಂದ್ರ ಲೇಔಟ್​​ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು‌.
ಆತ್ಮಹತ್ಯೆ ಪ್ರಕರಣದಲ್ಲಿ ಸದ್ಯ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.


ಭೋವಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮಗಳ ಕುರಿತಾದ ವಿಚಾರಣೆಗೆ ಹಾಜರಾಗಿದ್ದ ಜೀವಾಗೆ ಸಿಐಡಿಯ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಕಿರುಕುಳ ನೀಡಿದ್ದಲ್ಲದೆ 25 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಮೃತಳ ಸಹೋದರಿ ಸಂಗೀತಾ ಆರೋಪಿಸಿದ್ದರು.

ಅಲ್ಲದೆ ತನ್ನ ಸಹೋದರಿ ಜೀವಾ ಬರೆದಿಟ್ಟಿದ್ದ ಸುಮಾರು 10ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್‌ಗಳ ಸಮೇತ ಅವರ ಸಹೋದರಿ ಸಂಗೀತಾ ಬನಶಂಕರಿ ಠಾಣೆಗೆ ದೂರು ನೀಡಿದ್ದರು. ದೂರನ್ನು ಆಧರಿಸಿ ಬನಶಂಕರಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸಿಸಿಬಿ ಪೊಲೀಸರಿಗೆ ವಹಿಸಿದ್ದರು. ನಂತರದ ಬೆಳವಣಿಗೆಯಿಂದಾಗಿ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿತ್ತು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ