ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತದ ಸುಸ್ಥಿರ ಕೈಗಾರಿಕಾ ಭವಿಷ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಇ-ಬಸ್‌ಗಳು, ಇ-ಟ್ರಕ್‌ಗಳು ಮತ್ತು ಕ್ಲೀನ್ ಟ್ರಾನ್ಸ್‌ಪೋರ್ಟೇಶನ್ (ಹಸಿರು ಸಾರಿಗೆ) ಸಿಸ್ಟಮ್‌ಗಳಿಗೆ ಸಂಬಂಧಿಸಿದ ಉದಯೋನ್ಮುಖ ಮೊಬಿಲಿಟಿ ಉಪಕ್ರಮಗಳ ಕುರಿತು ಗೌರವಾನ್ವಿತ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಪರಿಶೀಲನಾ ಸಭೆ ಜರುಗಿತು.
ಸಭೆಯಲ್ಲಿ ಭಾರಿ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿ ಶ್ರೀ ಕಮ್ರಾನ್ ರಿಜ್ವಿ ಮತ್ತು ಹೆಚ್ಚುವರಿ ಕಾರ್ಯದರ್ಶಿ ಡಾ. ಹನೀಫ್ ಖುರೇಷಿ ಅವರು ಉಪಸ್ಥಿತರಿದ್ದು, ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.
ನಾವೀನ್ಯತೆಗೆ ವೇಗ: ದೇಶದಾದ್ಯಂತ ಮುಂದಿನ ಪೀಳಿಗೆಯ ಮೊಬಿಲಿಟಿ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಹೊಸ ಆವಿಷ್ಕಾರಗಳನ್ನು ಉತ್ತೇಜಿಸಲು ದೀರ್ಘಕಾಲೀನ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಗಮನಹರಿಸಲಾಯಿತು.
ಇಂಧನ ದಕ್ಷತೆಯ ಸಾರಿಗೆ: ಪರಿಸರ ಸ್ನೇಹಿ ಮತ್ತು ಇಂಧನ ದಕ್ಷತೆಯ ಸಾರಿಗೆ ಪರಿಹಾರಗಳನ್ನು ದೇಶಾದ್ಯಂತ ವ್ಯಾಪಕವಾಗಿ ಉತ್ತೇಜಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ನೆಟ್ ಝೀರೋ ಗುರಿ: 2070 ರ ವೇಳೆಗೆ 'ನೆಟ್ ಝೀರೋ' (ಶೂನ್ಯ ಕಾರ್ಬನ್ ಹೊರಸೂಸುವಿಕೆ) ಸಾಧಿಸುವ ಭಾರತದ ಬದ್ಧತೆಗೆ ಅನುಗುಣವಾಗಿ ಈ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
"ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾರಿ ಕೈಗಾರಿಕೆಗಳ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಇ-ಮೊಬಿಲಿಟಿ ಮತ್ತು ಹಸಿರು ಸಾರಿಗೆ ವ್ಯವಸ್ಥೆಗಳ ಪ್ರಗತಿ ಹಾಗೂ ಮುಂದಿನ ಕಾರ್ಯವಿಧಾನಗಳ ಕುರಿತು ಉನ್ನತ ಮಟ್ಟದ ಪರಿಶೀಲನೆ ನಡೆಸಿದರು."



