Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇ.ಡಿ ದಾಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತವಲ್ಲ. ಸಲ್ಲಿಕೆಯಾದ ದೂರಿನ ಆಧಾರದ ಮೇರೆಗೆ ದಾಳಿ ನಡೆಸಲಾಗಿದ್ದು, ಇದರ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂಬುದು ತಪ್ಪು ಸಂದೇಶವಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಳೆದ 30 ವರ್ಷಗಳ ಗೆಳೆತನದಲ್ಲಿ ಹಲವು ಬಾರಿ ಭಿನ್ನಾಭಿಪ್ರಾಯಗಳು ಬಂದಿದ್ದರೂ ಒಟ್ಟಾಗಿಯೇ ಇದ್ದಾರೆ. ಇವರಿಬ್ಬರು ಅಹಿಂದದ ಎರಡು ಕಣ್ಣುಗಳಿದ್ದಂತೆ. ಅವರ ಸಂಬಂಧಕ್ಕೆ ಧಕ್ಕೆ ತರುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.

Advertisement

ಮೇ ತಿಂಗಳಲ್ಲಿ ಇ.ಡಿಗೆ ದೂರು ಸಲ್ಲಿಕೆಯಾಗಿ, ಜೂನ್‌ನಲ್ಲಿ ಮಂಜುನಾಥ್ ಮನೆ ಮೇಲೆ ದಾಳಿಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದ್ದು, ಇದರ ಬಗ್ಗೆ ನ್ಯಾಯಾಲಯವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.

ಇ.ಡಿ ಪರಿಶೀಲನೆ ಅಂತ್ಯ: ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಅಪರ ಆಯುಕ್ತ ಡಾ. ವೈ. ಮಂಜುನಾಥ್ ನಿವಾಸದಲ್ಲಿ ಸತತ 36 ಗಂಟೆ ಹಾಗೂ ಗೋಕಾಕ್‌ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸುಮಾರು 37 ಗಂಟೆಗಳ ಕಾಲ ನಡೆದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸುದೀರ್ಘ ಶೋಧ ಕಾರ್ಯಾಚರಣೆ ಅಂತ್ಯಗೊಂಡಿದೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳು ಹಾಗೂ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬದ ವಿಷಯದಲ್ಲಿ ನಾವೆಲ್ಲರೂ ಒಂದಾಗಿದ್ದು, ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ಹರಿಸುವ ಕುರಿತ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಇಡಿ ದಾಳಿಯಲ್ಲಿ ಸಿಕ್ಕ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವಲ್ಲ; ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆಚಹಾ ಕಪ್ ರಸ್ತೆ ಬದಿ ಎಸೆದಿದ್ದನ್ನು ಪ್ರಶ್ನಿಸಿದ ಪೌರಕಾರ್ಮಿಕನ ಮೇಲೆ ಹಲ್ಲೆನಕಲಿ ಔಷಧ ಜಾಲ; ಏಕಕಾಲಕ್ಕೆ ಎಸ್‌ಐಟಿ ದಾಳಿ, ಕೋಟ್ಯಂತರ ಮೌಲ್ಯದ ಔಷಧ ಜಪ್ತಿ2028ರ ಚುನಾವಣೆ ಸ್ಪರ್ಧೆ ನಿರಾಕರಣೆ ಹೇಳಿಕೆ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತುರಸ್ತೆ ಗುಂಡಿ ಮುಚ್ಚಲು ಜೆಟ್ ಪ್ಯಾಚರ್: ಸಚಿವ ಕೃಷ್ಣಭೈರೇಗೌಡ ಚಾಲನೆಸಿಕ್ಕಿರುವುದು ನಮ್ಮದೇ ಹಣ, ಕಾನೂನು ಮೂಲಕ ವಾಪಸ್ ಪಡೆಯುತ್ತೇವೆ: ಸಚಿವ ಸತೀಶ್ ಜಾರಕಿಹೊಳಿನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ಇ.ಡಿ ದಾಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲವಿದೇಶದಲ್ಲಿ ಹೂಡಿಕೆ ಸುಳ್ಳು, ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ