Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಶಿಕ್ಷಣ ಎನ್ನುವುದು ತಲೆಗೆ ತುರುಕುವ ವಿಚಾರ ಅಲ್ಲ

ಚಂದ್ರವಳ್ಳಿ ನ್ಯೂಸ್ ಹಿರಿಯೂರು :
 ಶಿಕ್ಷಣ ಎನ್ನುವುದು ತಲೆಗೆ ತುರುಕುವ ವಿಚಾರ ಅಲ್ಲ. ಅದು ಮನಸ್ಸಿಗೆ ತರಬೇತಿ ಕೊಡುವ ಕಾಯಕ ಎಂದು ಅತ್ಯುತ್ತಮ ಗಣಿತ ಶಿಕ್ಷಕ ಪ್ರಶಸ್ತಿ ವಿಜೇತ ಡಾ. ಜಿ ಎಸ್ ಗಣೇಶ್ ಹೇಳಿದರು.

ತಾಲೂಕಿನ ಬ್ಯಾಡರಹಳ್ಳಿ ಅಧಿರ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಂದು ಮಗುವು ಹುಟ್ಟುತ್ತಲೇ ವಿಶ್ವಮಾನವನಾಗಿ ಹುಟ್ಟುತ್ತಾನೆ. ಆದರೆ ಸಾಮಾನ್ಯ ನಾಗರಿಕರು ಆ ಮಗುವನ್ನು ಅಲ್ಪ ಮಾನವನನ್ನಾಗಿ ಮಾಡುತ್ತಾರೆ. ಮತ್ತೆ ಆ ಮಗುವನ್ನು ವಿಶ್ವಮಾನವನ್ನಾಗಿ ಮಾಡುವುದೇ ಶಿಕ್ಷಣದ ಮೂಲ ಉದ್ದೇಶ.ಸಂಸ್ಕಾರ ಹಾಗೂ ಮೌಲ್ಯಗಳನ್ನು ಒಳಗೊಂಡ ಶಿಕ್ಷಣವನ್ನು ನೀಡುವ ಶಿಕ್ಷಣ ಸಂಸ್ಥೆಗಳನ್ನು ತೆರೆದರೆ ಹತ್ತು ಜೈಲುಗಳನ್ನು ಮುಚ್ಚಬಹುದು ಎಂಬ ಮಾತಿದೆ. ಈಗಿನ ಮಕ್ಕಳಿಗೆ ಕೇವಲ ಪಠ್ಯಕ್ರಮದ ಬಗ್ಗೆ ಹೇಳಿದರೆ ಸಾಲದು.

ಸಾಮಾಜಿಕ ಕಳಕಳಿ,ಮಾನವೀಯ ಮೌಲ್ಯ, ಸಂಸ್ಕಾರ, ಸಂಸ್ಕೃತಿ ಇವೆಲ್ಲದರ ಬಗ್ಗೆಯೂ ಸಹ ತಿಳಿಹೇಳಬೇಕಾಗುತ್ತದೆ. ಪೋಷಕರುಗಳಾದ ನಾವುಗಳು ಉತ್ತಮ ಸನ್ಮಾರ್ಗದಲ್ಲಿ ಸಾಗುವುದರೊಂದಿಗೆ ಮಕ್ಕಳನ್ನು ಸಹ ಸರಿದಾರಿಗೆ ತರಲು ಪ್ರಯತ್ನಿಸಬೇಕು. ಆಗಲೇ ನಾವು ಉತ್ತಮ ಸಮಾಜಕ್ಕೆ ಮಾದರಿಯಾಗಲು ಸಾಧ್ಯವಾಗುತ್ತದೆ. ಗುರು ಹಿರಿಯರನ್ನು ಗೌರವಿಸುವುದನ್ನು ಹೇಳಿಕೊಡಬೇಕಾಗುತ್ತದೆ.

ವಿನಯ,ವಿವೇಕ,ಸಂಸ್ಕಾರ, ಮಾನವೀಯ ಮೌಲ್ಯಗಳಿಲ್ಲದ ಯಾವುದೇ ವಿದ್ಯೆ ಮತ್ತು ಹುದ್ದೆ ವ್ಯರ್ಥವಾಗುತ್ತದೆ.,ಕಣ್ಣಿಗೆ ಕಾಣದ ದೇವರಿಗೆ ಚಿನ್ನ ಹಾಕುವ ಮುನ್ನ ಕಣ್ಣೆದುರಿಗೆ ಕಾಣುವ ಪ್ರತ್ಯಕ್ಷ ದೇವರುಗಳಾದ ತಂದೆ ತಾಯಿಯರಿಗೆ ಅನ್ನ ಹಾಕು ಎನ್ನುವ ಮಾತಿನಂತೆ ನಾವೆಲ್ಲರೂ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸೋಣ ಎಂದರು.

ಶಾಲೆಯ ಅಧ್ಯಕ್ಷ ಬೋರೇಗೌಡ ಮಾತನಾಡಿ ಬಯಲುಸೀಮೆಯ ಈ ಹಳ್ಳಿಗಾಡಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ತೆರೆದ ಈ ಶಾಲೆ ಸಮಾಜಕ್ಕೆ ಸುಸಂಸ್ಕೃತ, ಸಜ್ಜನ ಪ್ರಜೆಗಳನ್ನು ರೂಪಿಸಿಕೊಡಲಿದೆ. ಇಂದು ಎಲ್ಲರೂ ಅಂಕಗಳಿಕೆಯ ವಿದ್ಯೆ ಕಲಿಸಲು ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಅಂಕಗಳಿಕೆಯ ಜೊತೆಗೆ ಸಂಸ್ಕೃತಿ, ಸಂಸ್ಕಾರ, ಸಜ್ಜನಿಕೆಯನ್ನು ಕಲಿಸಿಕೊಡಬೇಕಿದೆ.ಮಕ್ಕಳ ಬಗ್ಗೆ ಶಾಲೆಯ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರು ಮೇಲೂ ಇದೆ.

ಮಕ್ಕಳಿಗೆ ಮನೆಯಲ್ಲಿಯೂ ಓದುವ ವಾತಾವರಣವನ್ನು ನಿರ್ಮಾಣ ಮಾಡಿಕೊಡಿ.ಇಂದಿನ ಪೋಷಕರು ಮನೆಯೇ ಮೊದಲ ಪಾಠಶಾಲೆ ಎಂಬ ಮಾತನ್ನು ಮರೆತು ಬಿಟ್ಟಿದ್ದಾರೆ. ಪೋಷಕರು ಮತ್ತು ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಈ ಸಮಾಜಕ್ಕೆ ಪ್ರತಿಭಾವಂತ, ಸಜ್ಜನ ಮಕ್ಕಳನ್ನು ಕೊಡಲು ಸಾಧ್ಯವಾಗುತ್ತದೆ.ಹಾಗಾಗಿ ಗುಣಮಟ್ಟದ ವಿದ್ಯೆಯನ್ನು ಮಕ್ಕಳಿಗೆ ಪ್ರೀತಿಯಿಂದ ಧಾರೆ ಎರೆಯೋಣ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವಿವಿಧ ರೀತಿಯ ಆಕರ್ಷಕ ನೃತ್ಯಗಳಿಂದ ನೆರೆದ ಜನರ ಮನ ಸೆಳೆದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಜಂಟಿ ಕಾರ್ಯದರ್ಶಿ ನಾಗರಾಜ್ ಯಲಚವಾಡಿ,ಹಿರಿಯ ವೈದ್ಯ ಡಾ ವಿಷ್ಣು,ಸಂಸ್ಥೆಯ ಕಾರ್ಯದರ್ಶಿ ಕೆ ಶೃತಿ,ನಿರ್ದೇಶಕ ಹೆಚ್ ಬಿ ಮಿಥುನ್,ಮುಖ್ಯ ಶಿಕ್ಷಕಿ ಶಶಿಕಲಾ ಡಿ, ಶಿಕ್ಷಕಿಯರಾದ ಸಾಧಿಯಾ ಬಾನು, ಶ್ವೇತಾ, ಕಾವೇರಿ,ನೃತ್ಯ ಸಂಯೋಜಕ ಪ್ರದೀಪ್ ಹೆಲ್ವಾರ್ ಸೇರಿದಂತೆ ಶಾಲಾ ಸಿಬ್ಬಂದಿಗಳು ಹಾಜರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು