Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತರಿಗೆ ಮೂಲಮಂತ್ರವಾಗಬೇಕು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತ ವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗ ಮಾತ್ರ ಗುಲಾಮಗಿರಿಯನ್ನು ಮೆಟ್ಟಿನಿಂತು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದು ತಿಳಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ , ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತ ವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಮೂಲಕ ಸಮಾಜದಲ್ಲಿ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು ಹಾಗೂ ಶೂದ್ರರು ಹೀಗೆ ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರಿಗೆ ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದು ಸಿಎಂ ತಿಳಿಸಿದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದು ಸಿಎಂ ಕರೆ ನೀಡಿದರು.

1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ನಾನು ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು.

ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ ಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ