Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತು ಪರಿಶೀಲಿಸಿದ ಶಿಕ್ಷಣಾಧಿಕಾರಿಗಳು

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಪಠ್ಯ ವಿಷಯದ ಪರಿಕಲ್ಪನೆಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಲು ಕಲಿಕಾ ಸಂಪನ್ಮೂಲಗಳು ಮತ್ತು ತಂತ್ರಜ್ಞಾನ ಬಳಕೆ ಅಗತ್ಯ ಎಂದು ಡಯಟ್ ಉಪನ್ಯಾಸಕ ಎಸ್.ಬಸವರಾಜು ಹೇಳಿದರು.


ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದ ಶ್ರೀ ಆಂಜನೇಯಸ್ವಾಮಿ ಸಂಯುಕ್ತ ಪ.ಪೂ ಕಾಲೇಜು ಪ್ರೌಢಶಾಲೆಗೆ ಗುರುವಾರ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆ ಕುರಿತು ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಪರಿಶೀಲಿಸಿ ಮಾತನಾಡಿದರು. ಒಂದು ಚಿತ್ರ ನೂರು ಪದಗಳಿಗೆ ಸಮನಾಗಿದ್ದು ಶಿಕ್ಷಕರು ತರಗತಿ ನಿರ್ವಹಣೆಯಲ್ಲಿ ಕಲಿಕಾ ಸಂಪನ್ಮೂಲ ಮತ್ತು ತಂತ್ರಜ್ಞಾನ ಬಳಕೆ ಮಾಡುವುದರಿಂದ ವಿದ್ಯಾರ್ಥಿಗಳು ವಿಷಯವನ್ನು ಸುಲಭವಾಗಿ  ಅರ್ಥೈಸಿಕೊಳ್ಳುವರು ಇದರಿಂದ ಬೋಧನೆ ಮತ್ತು ಕಲಿಕಾ ಪ್ರಕ್ರಿಯೆ ಪರಿಣಾಮಕಾರಿಯಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ನಿರಂತರ ಅಧ್ಯಯನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಶಾಲಾ ಅವಧಿ ಮುಗಿದ ನಂತರ ಪ್ರತಿದಿನ ಮನೆಯಲ್ಲಿ ತಾವು ಸೃಜಿಸಿಕೊಂಡಿರುವ ವೇಳಾಪಟ್ಟಿಗನುಸಾರವಾಗಿ ಪ್ರತಿ ವಿಷಯದಲ್ಲಿ ಘಟಕವಾರು  ಮುಖ್ಯಾಂಶಗಳನ್ನು ಟಿಪ್ಪಣಿ ಮಾಡಿಕೊಂಡು ಪುನರ್ ಮನನ ಮಾಡಿಕೊಳ್ಳಬೇಕು ಎಂದರು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ಕಲಿಕಾ ಸಾಮರ್ಥ್ಯವನ್ನು ಗುರುತಿಸಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕು ಎಂದರು. ಮಕ್ಕಳಲ್ಲಿ ಪರೀಕ್ಷಾ ಒತ್ತಡ ನಿವಾರಣೆಗೆ ಆತ್ಮವಿಶ್ವಾಸ ತುಂಬಲು ಗೌರವಾನ್ವಿತ ಮಾನ್ಯ ಪ್ರಧಾನ ಮಂತ್ರಿಗಳು  ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿಕೊಡಲಿದ್ದಾರೆ. ನೋಂದಣಿ ಮಾಡಿಕೊಳ್ಳಲು ಜನವರಿ ೧೪ ಕಡೆಯ ದಿನವಾಗಿದ್ದು ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವಂತೆ ಶಿಕ್ಷಕರು ಮಕ್ಕಳಿಗೆ ಪ್ರೇರಣೆ ನೀಡಬೇಕು ಎಂದರು.

  ತಾಳ್ಯ ಸಮೂಹ ಸಂಪನ್ಮೂಲ ಕೇಂದ್ರದ ಸಿ.ಆರ್.ಪಿ ಪ್ರಕಾಶ್ ಪರೀಕ್ಷಾ ಚರ್ಚಾ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ನೋಂದಣಿ ಮಾಡಿಕೊಳ್ಳುವ ಕುರಿತು ಮಾರ್ಗದರ್ಶನ ಮಾಡಿದರು.

  ಮುಖ್ಯ ಶಿಕ್ಷಕಿ ಕೆ.ಸಿ.ರಶ್ಮಿ, ಶಿಕ್ಷಕರಾದ ಎಸ್.ಹೆಚ್ ಶಾಂತಕುಮಾರ, ಜೆ.ನಾಗರಾಜ, ಡಿ.ಕೆ ವೇದಮೂರ್ತಿ, ಪಿ.ಎ ಸಂಧ್ಯಾ, ಜಿ.ಎಂ ಜ್ಯೋತಿ ಮತ್ತಿತರರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು