ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ “ಡಿಜಿಟಲ್ ಡೆಮೊಗ್ರಾಫಿ ಮತ್ತು ಸಾರ್ವಜನಿಕ ಆರೋಗ್ಯದಲ್ಲಿ ಕೃತಕ ಬುದ್ಧಿಮತ್ತೆ” ಕುರಿತು ಶೈಕ್ಷಣಿಕ ಕಾರ್ಯಾಗಾರವನ್ನು ಇದೇ ಜೂನ್ 06ರಂದು ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಗುಡ್ಡದರಂಗವ್ವನಹಳ್ಳಿ ಜ್ಞಾನಗಂಗೋತ್ರಿ ಆವರಣದದಲ್ಲಿರುವ ಸ್ನಾತಕೋತ್ತರ ಕೇಂದ್ರದ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 11ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸಮಿತಿ ಸದಸ್ಯ ಡಾ.ಬಸವಕುಮಾರಸ್ವಾಮಿ, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ.ರಾಜೇಶ್ ಭಾಗವಹಿಸುವರು ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಯುವರಾಜ್ ತಿಳಿಸಿದ್ದಾರೆ.



