LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಸಿ ಕಚೇರಿ ಮುಂದೆ ಬಿಜೆಪಿ ಶಾಸಕರ ಮೇಲೆ ಮೊಟ್ಟೆ ತೂರಾಟ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ರಾಜ್ಯ ಕಾಂಗ್ರೆಸ್ (ಕೆಪಿಸಿಸಿ) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಪ್ರತಿಭಟನೆಯ ವೇಳೆ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಚೇರಿ ಮುಂಭಾಗಕ್ಕೇ ಬಂದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.

ಕಚೇರಿ ಅಂಗಳದಲ್ಲೇ ಪ್ರತಿಭಟನಾ ಕಾಳಗ:
ಸರ್ಕಾರದ ವಿರುದ್ಧ ಕರಪತ್ರ ಹಂಚಿಕೆ ಹಾಗೂ ಕೆಪಿಸಿಸಿ ಕಚೇರಿ ಮುತ್ತಿಗೆಗೆ ನಿರ್ಧರಿಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಕಂಟೋನ್ಮೆಂಟ್ ಪ್ರದೇಶದ ಬಳಿಯೇ ತಡೆದು ವಶಕ್ಕೆ ಪಡೆದಿದ್ದರು. ಆದರೆ, ಪ್ರತಿಭಟನಾ ಸ್ಥಳದ ಸರಿಯಾದ ಮಾಹಿತಿ ಇಲ್ಲದ ಕಾರಣ ಶಾಸಕ ಬಿ.ಪಿ. ಹರೀಶ್ ಅವರು ನೇರವಾಗಿ ಕೆಪಿಸಿಸಿ ಕಚೇರಿಯ ಮುಂಭಾಗಕ್ಕೇ ಆಗಮಿಸಿದ್ದರು.

ಧಿಕ್ಕಾರ-ಮೊಟ್ಟೆ ತೂರಾಟ: ಶಾಸಕ ಹರೀಶ್ ಕಾರಿನಿಂದ ಇಳಿದು ಕೆಪಿಸಿಸಿ ಕಚೇರಿಯಂಗಳಕ್ಕೆ ಹೆಜ್ಜೆ ಇಡುತ್ತಿದ್ದಂತೆ, ಅಲ್ಲೇ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಬೃಹತ್ ಪ್ರಮಾಣದಲ್ಲಿ ಧಿಕ್ಕಾರ ಕೂಗಿದರು. ಅಷ್ಟಕ್ಕೇ ನಿಲ್ಲದೆ, ಏಕಾಏಕಿ ಶಾಸಕರತ್ತ ಮೊಟ್ಟೆಗಳನ್ನು ತೂರಿದ್ದಾರೆ.
ಪೋಲಿಸರಿಂದ ಶಾಸಕರ ರಕ್ಷಣೆ: ಕಚೇರಿ ಅಂಗಳದಲ್ಲೇ ಪರಿಸ್ಥಿತಿ ಕೈಮೀರುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಶಾಸಕ ಬಿ.ಪಿ. ಹರೀಶ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರ ರೋಷದಿಂದ ರಕ್ಷಿಸಿ ಪಕ್ಕದ ಗಲ್ಲಿಗೆ ಕರೆದೊಯ್ದಿದ್ದಾರೆ. ಬಳಿಕ ತಮ್ಮ ಪೊಲೀಸ್ ಜೀಪ್‌ನಲ್ಲೇ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ರವಾನಿಸಿದ್ದಾರೆ.

ಕೆಪಿಸಿಸಿ ಕಚೇರಿಯ ಮುಂಭಾಗದಲ್ಲೇ ಶಾಸಕರ ಮೇಲೆ ನಡೆದ ಈ ಮೊಟ್ಟೆ ತೂರಾಟದ ಘಟನೆ ರಾಜಧಾನಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ರಾಜಕೀಯ ಕಾಳಗವನ್ನು ಮತ್ತಷ್ಟು ಕಾವೇರುವಂತೆ ಮಾಡಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇರ ನೇಮಕಾತಿ: ಆನ್‍ಲೈನ್ ಅರ್ಜಿ ಆಹ್ವಾನವೈದ್ಯಕೀಯ ಸೇವೆಗಳ ಆಯುಕ್ತಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಜುಲೈ 27 ಕ್ಕೆ ನೇರ ಸಂದರ್ಶನರಾಜ್ಯದಲ್ಲಿ 70,000 ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ ಅಕ್ರಮವೆಸಗಿದರೆ ಜೈಲು ಶಿಕ್ಷೆ ಖಚಿತ-ಕಟಾರಿಯಾಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನ ಪರಿಷ್ಕರಣೆ ಆಗಬೇಕು-ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ ಗೌಡಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಲಾಲ್‍ಬಾಗ್‍ನಲ್ಲಿ ವಿವಿಧ ಸ್ಪರ್ಧೆಗಳು ಮತ್ತು ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಜಾಗೃತಿಯೋ? ಅಥವಾ ಐದು ವರ್ಷದ ಅಡಮಾನವೋ? ಮತದಾರ ಬದಲಾಗದಿದ್ದರೆ ತಾಲೂಕಿನ ಭವಿಷ್ಯಕ್ಕೆ ಬೆಳಕಿಲ್ಲ!ಕೇಂದ್ರದ ವಿರುದ್ಧ ಡಿಸಿಎಂ ವಾಗ್ದಾಳಿ: ಸಂಪುಟ ವಿಸ್ತರಣೆ, ಬರ ಹಾಗೂ ತುಮಕೂರು ಏರ್‌ಪೋರ್ಟ್‌ ಕುರಿತು ಪ್ರಮುಖ ಹೇಳಿಕೆಮಳೆ ಅಭಾವ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇಲಾಖೆಯಿಂದ ತುರ್ತು ಮುನ್ನೆಚ್ಚರಿಕಾ ಯೋಜನೆ ಪ್ರಕಟ!ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: ಹೈಕಮಾಂಡ್ ಮುದ್ರೆಗೆ ಕಾಯುತ್ತಿರುವ ಸಿಎಂ ಡಿ.ಕೆ ಶಿವಕುಮಾರ್ಕೆಪಿಸಿಸಿ ಕಚೇರಿ ಮುಂದೆ ಬಿಜೆಪಿ ಶಾಸಕರ ಮೇಲೆ ಮೊಟ್ಟೆ ತೂರಾಟ!