Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಎಸ್.ಐ.ಆರ್. ಪ್ರಕ್ರಿಯೆ ರದ್ದುಗೊಳಿಸಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಸ್ಲಂ
ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆಯಿಂದ ಶನಿವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ನೆಪದಲ್ಲಿ ನೈಜ ಮತದಾರರನ್ನು ಮತ ಪಟ್ಟಿಯಿಂದ ಡಿಲಿಟ್ ಮಾಡುವುದು ಎಸ್.ಐ.ಆರ್ ಉದ್ದೇಶವೆನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಕರ್ನಾಟಕದಲ್ಲಿ ಒಂದು ಕೋಟಿಗೂ ಹೆಚ್ಚು ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. 2025 ರ ಮತಪಟ್ಟಿಯಂತೆ

Advertisement

ಚುನಾವಣೆ ನಡೆಯಬೇಕು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಲಾಗಿದೆ. ಎಸ್.ಐ.ಆರ್.ನಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿರುವುದರಿಂದ ಎಸ್.ಐ.ಆರ್. ಬೇಡವೆ ಬೇಡ ಎಂದು ಒತ್ತಾಯಿಸಿದರು.

ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಎಸ್.ಐ.ಆರ್.ನಿಂದ ಮತದಾನದಿಂದ ವಂಚಿತರಾಗುತ್ತಿದ್ದಾರೆ. ಫಾರಂ ನಂ.6 ರ ಮೂಲಕ ಮತದಾರರ ಹೆಸರುಗಳು ಮತ ಪಟ್ಟಿಗೆ ಸೇರ್ಪಡೆಯಾಗುತ್ತಿಲ್ಲ. ಫಾರಂ ನಂ. 7 ನ್ನು ಸಲ್ಲಿಸಿ ಅರ್ಹ ಮತದಾರರನ್ನು ಮತ ಪಟ್ಟಿಯಿಂದ ಡಿಲಿಟ್ ಮಾಡಿಸುವ ಕುತಂತ್ರ ನಡೆಸುತ್ತಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಂಡು ನೈಜ ಮತದಾರರನ್ನು ಮತ ಪಟ್ಟಿಯಲ್ಲಿ ಉಳಿಸಬೇಕೆಂದು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು.

ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಅನ್ನಪೂರ್ಣಮ್ಮ, ಸಂಘಟನಾ ಸಂಚಾಲಕಿ ಸುಧಾ ಡಿ, ದೇವಮ್ಮ, ನೀಲಮ್ಮ, ಉಮಾದೇವಿ, ಗುರುಪಾದಮ್ಮ, ಅನಿತ ಹಾಗೂ ಪ್ರಭಾ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗದ ದಸರಾ: ಶರಣ ಸಂಸ್ಕೃತಿಯ ಜನೋತ್ಸವ:ಮಂಗಳೂರಿನ ದಸರಾ; ಶಾರದಾ ಮಹೋತ್ಸವದಿಂದ ಜನೋತ್ಸವದವರೆಗೆ:… ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ-ರಮೇಶ್ ಬಾಬುನವರಾತ್ರಿ ಪ್ರಯುಕ್ತ ಅಂಭಾ ಭವಾನಿ ದೇವಿಗೆ ವಿಶೇಷ ಅಲಂಕಾರಹಾಡುಹಗಲೆ ವೃದ್ದೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಕಳ್ಳಛಲವಾದಿ ಗುರುಪೀಠದಲ್ಲಿ ಪ್ರತಿ ತಿಂಗಳ ಮೂರನೆ ಶನಿವಾರದಂದು ಆರೋಗ್ಯ ತಪಾಸಣೆ ಶಿಬಿರ ಆಗ್ನೇಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿಕಾಂತ್ ಎಸ್.ಯಾದವ್ ಮತ ನೀಡಲು ಮನವಿಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಸಿಜೆಐ ಸೂರ್ಯಕಾಂತ್ ಹಾಗೂ ಡಿಕೆಶಿ ಕರೆಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್' ಸಂಚಿಗೆ ರಕ್ತ ಕುದಿಯುತ್ತಿಲ್ಲವೇ?: ಹೆಚ್.ಡಿ. ಕುಮಾರಸ್ವಾಮಿ