ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯತ್ವ ಅಭಿಯಾನದ ಕಾರ್ಯಕ್ರಮ ನಡೆಯಿತು.
ಚಿತ್ರದುರ್ಗ ಜಿಲ್ಲಾ ಘಟಕದ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ. ಎಚ್. ಮೋಹನ್ (ಕೃಷ್ಣಾಪುರ), ಉಪಾಧ್ಯಕ್ಷರಾಗಿ ಆಯಿತೋಳು ವಿರೂಪಾಕ್ಷಪ್ಪ, ಕಾರ್ಯದರ್ಶಿಯಾಗಿ ಚಿತ್ರದುರ್ಗದ ವಿ. ಸುಕನ್ಯಾ, ಖಜಾಂಚಿಯಾಗಿ ಹೊಸದುರ್ಗದ ಗೂಳಿಹಟ್ಟಿಯ ಆರ್.ಚಂದ್ರಕಲಾ ಹಾಗೂ ರಾಜ್ಯ ಸಂಚಾಲಕರಾಗಿ ಚಿಕ್ಕೋಬನಹಳ್ಳಿಯ ಸಿ.ವಿ. ಬಾಬು ಅವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.




