Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುರ್ತು ಕಾಮಗಾರಿ ಜೂನ್ 19 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.


ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ 2025 ರ  ಜೂನ್ 19 ರಂದು ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ 20 ರಂದು  ಶುಕ್ರವಾರದ ಬೆಳಿಗ್ಗೆ 6-00 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ - 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ.


ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5 ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿಯ ಪ್ರಕಟಣೆ ತಿಳಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ