Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರಿನಲ್ಲಿ ಐಟಿ ಮತ್ತು ಬಿಟಿ ಕಂಪನಿಗಳ ಸ್ಥಾಪನೆಗೆ ಒತ್ತು

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ವೃತ್ತಿಪರರು ಮತ್ತು ಪ್ರತಿಭಾವಂತರು ತುಮಕೂರು ಹಾಗೂ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಐಟಿ ಮತ್ತು ಬಿಟಿ ಕಂಪನಿಗಳಿಗೆ ನೆಲೆಯಾಗಲು ಸಜ್ಜಾಗುತ್ತಿದೆ.


ಪ್ರತಿದಿನ ಸುಮಾರು 5,000 ವೃತ್ತಿಪರರು ಕೆಲಸಕ್ಕಾಗಿ ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವುದನ್ನು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮುಖ್ಯಸ್ಥ ಸಂಜೀವ್ ಕುಮಾರ್ ಗುಪ್ತಾ ಅವರು ಗುರುತಿಸಿದ್ದಾರೆ. ಈ ಮಾಹಿತಿಯಿಂದ ತುಮಕೂರಿನಲ್ಲಿ ನೆಲೆ ಒದಗಿಸಲು ಕಂಪನಿಗಳಿಗೆ ಮನವರಿಕೆ ಮಾಡಿಕೊಡಲು ಮುಂದಾಗಿದೆ.

ಎರಡನೇ ಹಂತದ ನಗರಗಳಲ್ಲಿ ಕಂಪನಿಗಳನ್ನು ಸ್ಥಾಪಿಸಿದರೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಐಟಿ ಮತ್ತು ಬಿಟಿ ಕಾರ್ಯದರ್ಶಿ ಡಾ. ಏಕ್ ರೂಪ್ ಕೌರ್ ಮತ್ತು ನಿರ್ದೇಶಕ ರಾಹುಲ್ ಎಸ್ ಸಂಕನೂರ್ ಅವರು ಕಂಪನಿಗಳಿಗೆ ಮನವರಿಕೆ ಮಾಡುತ್ತಿದ್ದಾರೆ. ವಾಸ್ತವವಾಗಿ,ಇಲಾಖೆಯು ಮೈಸೂರು ಮತ್ತು ದಕ್ಷಿಣ ಕನ್ನಡದ ಕಂಪನಿಗಳ ಕ್ಲಸ್ಟರ್‌ಗಳಿಗೆ ಯೋಜನೆಯನ್ನು ರೂಪಿಸಿದೆ ಆದರೆ ಬೆಂಗಳೂರಿಗೆ ಹತ್ತಿರದಲ್ಲಿರುವ ತುಮಕೂರು ಅವಕಾಶ ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರತಿ ವರ್ಷ ಸಾವಿರಾರು ಪದವೀಧರರನ್ನು ಹೊರಗೆ ತರುವ ಏಳು ಎಂಜಿನಿಯರಿಂಗ್ ಕಾಲೇಜುಗಳೊಂದಿಗೆ ಸಾಕಷ್ಟು ಪ್ರತಿಭೆಗಳು ಇಲ್ಲಿದ್ದಾರೆ. ನಗರದಲ್ಲಿ 30,000 ಚದರ ಅಡಿ ವಿಸ್ತೀರ್ಣದ ಜಾಗದ ಆಫರ್ ನೊಂದಿಗೆ 150 ಕಂಪನಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಐಟಿ ಮತ್ತು ಬಿಟಿ ಕಂಪನಿಗಳಿಗೆ 100 ಎಕರೆ ಜಮೀನು ಮೀಸಲಿಟ್ಟಿದ್ದೇವೆ ಆದರೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಆದ್ದರಿಂದ ನಾವು ನಗರದಲ್ಲಿ ಜಾಗವನ್ನು ನೀಡಲು ಯೋಜಿಸಿದ್ದೇವೆ. ಬೆಂಗಳೂರಿಗೆ ಹೋಲಿಸಿದರೆ ಜಾಗಗಳ ಬಾಡಿಗೆಯು ಅವರಿಗೆ ತುಂಬಾ ಹೆಚ್ಚಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರಿಗೆ ಪ್ರಯಾಣಿಸುವ ತುಮಕೂರು ಮೂಲದ ಐಟಿ-ಬಿಟಿ ವೃತ್ತಿಪರರು ತಮ್ಮ ಕಂಪನಿಗಳು ಮತ್ತು ಪ್ರಯಾಣದ ಮಾಹಿತಿಯನ್ನು ನೋಂದಾಯಿಸಲು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಜಿಲ್ಲಾಧಿಕಾರಿ ಕೇಳಿಕೊಂಡಿದ್ದಾರೆ.
ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ
, ಪದವೀಧರರ ಕೌಶಲ್ಯ ಬಳಸಿಕೊಳ್ಳಲು ಇಲಾಖೆಯು ಇನ್ಕ್ಯುಬೇಶನ್ ಸೆಂಟರ್ ಅನ್ನು ತುಮಕೂರಿನಲ್ಲಿ ಸ್ಥಾಪಿಸುತ್ತಿದೆ ಎಂದು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ