Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀವನದ ಮೌಲ್ಯಗಳಿಗೆ ವಿದ್ಯಾರ್ಥಿಗಳಿಗೆ ಒತ್ತು ನೀಡಿ-ಧೀರಜ್ ಮುನಿರಾಜ್

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿ ಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ
, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ತಾಲ್ಲೂಕಿನ ರಾಜಘಟ್ಟ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಶಿವಕುಮಾರ್ ಜನ್ಮದಿನ ಅಂಗವಾಗಿ 20೨೫-೨೬ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.೮೦ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಕಳೆದ ಐದು ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದು ಮಾದರಿ ಕೆಲಸವಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸಿಮೀತವಾಗದೆ ಜೀವನದ ಪಾಠಗಳನ್ನು ಕಲಿಯಬೇಕಿದೆ ಎಂದರು.

ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ ಹಣದ ಸಂಪಾದನೆಯನ್ನೆ ಮಾನದಂಡವಾಗಿ ನೋಡಿ ಮಾನವೀಯ ಮೌಲ್ಯಗಳಿಗೆ ಬೆಲೆ ಇಲ್ಲದಂತಾಗಿದೆ. ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದರು.

ಜೆಡಿಎಸ್ ಮುಖಂಡ ಶಿವಕುಮಾರ್ ಮಾತನಾಡಿ ಬಡರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಹಣ್ಣುಹಂಪಲು ವಿತರಣೆ ಮಾಡಲಾಗಿದೆ. ರಾಜಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡುತ್ತಿರುವುದು ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಸಲುವಾಗಿ ಎಂದರು.

ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಲಾಯಿತು. ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಾರು ಜನ ಭಾಗವಹಿಸಿದ್ದರು. ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರದ ರಾಜಘಟ್ಟದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ವಿದ್ಯಾರ್ಥಿಗಳನ್ನು ಶಾಸಕ ಧೀರಜ್ ಮುನಿರಾಜು ಅಭಿನಂದಿಸಿದರು‌. ಶಿವಕುಮಾರ್, ಜೆಡಿಎಸ್ ಮುಖಂಡ ಬಿ.ಮುನೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ್,ಬಿಎಸ್ ಹರೀಶ್  ರಾಜಘಟ್ಟ,ವಿಎಸ್ಎಸ್ಎನ್ ಅಧ್ಯಕ್ಷ ಮುನಿಹನುಮಯ್ಯ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಕೋಡಿ ನರಸಿಂಹಮೂರ್ತಿ, ವೆಂಕಟರಮಣಪ್ಪ, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಕೆಂಪಣ್ಣ, ಕರವೇ ಮುಖಂಡ ರಾಜಘಟ್ಟ‌ರವಿ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST