Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್​​ಗೆ ಶಕ್ತಿ ಯೋಜನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್​​ಗೆ ಸೇರಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.


ಮುಖ್ಯಮಂತ್ರಿಗಳು ತಮ್ಮ ಎಕ್ಸ್ ಖಾತೆ ಮೂಲಕ ಸಂತೋಷ ಹಂಚಿದ್ದು ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂದು ತಿಳಿಸಿದ್ದಾರೆ.


ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ 2023ರ ಜೂನ್- 11 ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ - ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್-01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಕ್ತಿ ಯೋಜನೆ ಜಾರಿಗೆ ಕೊಟ್ಟ ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು ಎಂದಿದ್ದಾರೆ.‌

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ ಶಕ್ತಿ ಯೋಜನೆಯಡಿ ಸಾರಿಗೆ ನಿಗಮಗಳ ಬಸ್‌ಗಳಲ್ಲಿ 500 ಕೋಟಿ ಬಾರಿ ಮಹಿಳೆಯರು ಪ್ರಯಾಣಿಸಿರುವುದು ಗೋಲ್ಡನ್‌ಬುಕ್‌ಆಫ್‌ವರ್ಲ್ಡ್‌ರೆಕಾರ್ಡ್ಸ್‌ನಲ್ಲಿ ದಾಖಲಾಗಿರುವುದು ಹೆಮ್ಮೆಯ ಕ್ಷಣ ಎಂದು ತಿಳಿಸಿದ್ದಾರೆ.

ತಮ್ಮ ಎಕ್ಸ್ ಖಾತೆ ಮೂಲಕ ಸಂತೋಷ ಹಂಚಿರುವ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (ಜೂನ್ 11, 2023 - ಜುಲೈ 25, 2025 ರ ಅವಧಿ) ಐದು ಬಿಲಿಯನ್, ನಲತ್ತೊಂಬತ್ತು‌ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ಪಡೆದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ-ಮುಖ್ಯಮಂತ್ರಿ‌ಡಿ ಕೆ‌ಶಿವಕುಮಾರ್ ಈ ಯೋಜನೆ ಜಾರಿಗೊಳಿಸಿದ್ದರು ಎಂದು ಸಾರಿಗೆ ಸಚಿವರು ಸ್ಮರಿಸಿದ್ದಾರೆ.


 ಚಾರಿತ್ರಿಕ ಈ ಸಾಧನೆಯು ಕೆಎಸ್​ಆರ್​ಟಿಸಿ, ಬಿಎಂಟಿ‌‌ಸಿ, ವಾ‌ಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ‌ಆಡಳಿತ ಮಂಡಳಿ, ಸಾರಿಗೆ ಸಂಸ್ಥೆಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರುಗಳು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಮರ್ಪಿಸಲಾಗಿದೆ. ಸಮಸ್ತ ಸಿಬ್ಬಂದಿಗಳ ಪರಿಶ್ರಮ, ಕಾರ್ಯತತ್ಪರತೆ ಮತ್ತು ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ‌ಮುಖಂಡರುಗಳ ಸಹಕಾರ‌ಮರೆಯುವಂತಿಲ್ಲ ಅವರಿಗೆ ನನ್ನ ಧನ್ಯವಾದಗಳು. ಶಕ್ತಿ ಯೋಜನೆಯ ಪ್ರಾರಂಭದಿಂದಲೂ ಬೆಂಬಲ,‌ಪ್ರೋತ್ಸಾಹ‌ಹಾಗೂ ಸಕಾರಾತ್ಮಕ ಬದಲಾವಣೆಗಳಿಗೆ ಸಲಹೆ ನೀಡುತ್ತಾ ಬಂದಿರುವ ಮಾಧ್ಯಮದವರಿಗೆ ಧನ್ಯವಾದಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಎರಡನೇ ಬಾರಿಗೆ ನಾನು ಸಾರಿಗೆ ಸಚಿವನಾಗಿ ಅಧಿಕಾರ ವಹಿಸಿಕೊಂಡ‌ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರೆಂಟಿ ಯೋಜನೆಯಾದ ಶಕ್ತಿ‌ಯೋಜನೆಯು‌ಅತ್ಯಂತ ಸವಾಲಿನಿಂದ‌ಕೂಡಿದ್ದಾಗಿತ್ತು. ಕಳೆದ ಐದಾರು ವರುಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ‌ಬಸ್ಸುಗಳ ಸೇರ್ಪಡೆಯಾಗಿಲ್ಲ, ಹೊಸ‌ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ‌ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಎರಡು ವರುಷಗಳ‌ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌‌5800 ಹೊಸ ಬಸ್​ಗಳ ಸೇರ್ಪಡೆ,10000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ. ಆದರೆ, ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

Beyond Free Rides- ಎಂಬ ಹೆಸರಿನಲ್ಲಿ Sustainable Mobility Network ರವರು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ - ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ