Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಸಮಾಜ ಕಸ್ತೂರಿಬಾ ಶಿಶುವಿಹಾರದ ವತಿಯಿಂದ ಜು.14ರಂದು ಪರಿಸರ ದಿನಾಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : 
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜು. 14ರ ಭಾನುವಾರದಂದು ನಗರದ ಮಹಿಳಾ ಸಮಾಜ ಕಸ್ತೂರಿಬಾ ಶಿಶುವಿಹಾರದ ಆವರಣದಲ್ಲಿ ತಾಲ್ಲೂಕಿನ ಗೃಹಿಣಿಯರು
, ಹೆಣ್ಣು ಮಕ್ಕಳು ತಯಾರಿಸಿದ ಕರಕುಶಲ ವಸ್ತು ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಜೊತೆಗೆ ವಿವಿಧ ಬಗೆಯ ತಿನಿಸುಗಳನ್ನು ಒಳಗೊಂಡ ಆಹಾರ ಮೇಳ ಆಯೋಜನೆ ಮಾಡಲಾಗಿದೆ ಎಂದು ಮಹಿಳಾ ಸಮಾಜ ಕಸ್ತೂರಿಬಾ ಶಿಶುವಿಹಾರದ ಅಧ್ಯಕ್ಷೆ ವತ್ಸಲಾ  ತಿಳಿಸಿದರು.

ಮಹಿಳಾ ಸಮಾಜ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸ್ಥಳೀಯ ಮಹಿಳೆಯರಿಗೆ ತಮ್ಮ ಕಲೆ ಪ್ರದರ್ಶಿಸಲು ಮಹಿಳಾ ಸಮಾಜದ ವತಿಯಿಂದ ಉತ್ತಮ ವೇದಿಕೆ ಕಲ್ಪಿಸಲಾಗಿದೆ. ಬೆಳಿಗ್ಗೆ 11ಗಂಟೆಗೆ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.

 ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಸಂದರ್ಭದಲ್ಲಿ   ವಿಶೇಷವಾಗಿ  ವಿವಿಧ ಬಗೆಯ  ಚಿತ್ರಾನ್ನ , ಮಾವು ಮೇಳ ಆಯೋಜನೆ ಮಾಡಲಾಗಿದೆ.

ಅಲ್ಲದೆ ಸಾವಯವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಸಾರ್ವಜನಿಕರಿಗೆ ಕಸ ವಿಂಗಡಣೆ ಕುರಿತು ಭಾರತೀಯ ಮಾನವ ವಸಾಹತುಗಳ ಸಂಸ್ಥೆಯ ಪ್ರತಿನಿಧಿ ಎಸ್ ವಿ ಪುಷ್ಕರ್ ಹಾಗೂ ಡಿ ಎ ಕಿರಣ್‌ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾದ್ಯಾಯ ಜಯರಾಮಯ್ಯ, ಕಲಾವಿದ ಡೋನಹಳ್ಳಿ ಗೋವಿಂದರಾಜು, ಪರಿವರ್ತನಾ ಕಲಾ ಸಂಸ್ಥೆಯ ದೇವರಾಜು, ನೆಮ್ಮದಿ ಸೇವಾ ಸಂಸ್ಥೆಯ ಅಧ್ಯಕ್ಷ ರಾಮು ಜೋಗಿಹಳ್ಳಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಸಮಾಜದ  ಉಪಾಧ್ಯಕ್ಷರಾದ ನಿರ್ಮಲ, ಕಾರ್ಯದರ್ಶಿ ಬಿ.ಎ.ಗಿರಿಜಾ, ಸಹ ಕಾರ್ಯದರ್ಶಿ ಎಸ್. ವೀಣಾ, ಖಜಾಂಚಿ ಬಿ.ಸಿ. ಕವಿತಾ, ನಿರ್ದೇಶಕರಾದ  ದೇವಕಿ,  ಕವಿತ. ಕೆ.ಜೆ., ಎಂ. ಉಮಾದೇವಿ, ಮಮತ. ಕೆ.ಎಲ್,  ವನಿತ. ಕೆ. ರೇವತಿ, ಕವಿತ. ಆರ್ ಸೇರಿದಂತೆ ಹಲವರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!NEET UG ಮರು ಪರೀಕ್ಷೆ: ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ