ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಲ್ಲೋಹಳ್ಳಿ ಸರಕಾರಿ ಪ್ರೌಢಶಾಲೆ ಸಹಯೋಗದೊಂದಿಗೆ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ತಾಲೂಕು ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಶಾಲೆ ಆವರಣದಲ್ಲಿ ಹಣ್ಣಿನ ಗಿಡ & ಹೂವಿನ ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದುಕಾಡುಗಳ ನಾಶ, ವಾಯು ಮಾಲಿನ್ಯ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಜನರನ್ನು ಪ್ರೇರೇಪಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ
ಭೂಮಿಯ ಮೇಲಿನ ಜೀವವೈವಿಧ್ಯತೆ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವುದು.ಭವಿಷ್ಯದ ಪೀಳಿಗೆಗಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ಸುಸ್ಥಿರವಾಗಿ ಬಳಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಪ್ರತಿ ಮನೆಯ ಮುಂದೆ ಪ್ರತಿಯೊಬ್ಬರು ಒಂದೊಂದು ಗಿಡವನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರವನ್ನು ಕಾಪಾಡಬೇಕು ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.
ಈ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮದುರೆ ಒಕ್ಕೂಟದ ಅಧ್ಯಕ್ಷರಾದ ವಸಂತ, ವಲಯ ಮೇಲ್ವಿಚಾರಕರಾದ ಗಿರಿಜಾ, ಶಾಲಾ ಶಿಕ್ಷಕರಾದ ಅಂಬಿಕಾ , ಸೇವಾಪ್ರತಿನಿಧಿ ದೇವಿಕಾ, ಒಕ್ಕೂಟದ ಪದಾಧಿಕಾರಿಗಳು,ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



