Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಮ ಸಮಾಜ ನಿರ್ಮಿಸಲು ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆಗೆ ವಿದ್ಯಾವಂತರು ಮಾನವೀಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಡಾII ಬಿ.ಆರ್. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ನೂತನ ಒಳಾಂಗಣ ಕ್ರೀಡಾ ಸಂಕೀರ್ಣ ಹಾಗೂ ಮೊದಲನೆ ವರ್ಷದ ಬಿ.ಇ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ.

ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ಅವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದು ಸಿಎಂ ಹೇಳಿದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ  ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು.

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾII ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು. ಇಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ, ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದುದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು.

ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ, ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ