Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ರದ್ದು!

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶದಲ್ಲಿ ಜೈವಿಕ ಹಾಗೂ ಸ್ವಚ್ಛ ಇಂಧನ ಬಳಕೆಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಿಗ್ ಆಫರ್ ಘೋಷಿಸಿದೆ. ಇಥೆನಾಲ್ ಮಿಶ್ರಿತ ಪೆಟ್ರೋಲ್‌ನ ಆಯ್ದ ಮಾದರಿಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಪರಿಸರಸ್ನೇಹಿ ಇಂಧನ ಬಳಕೆ ಹೆಚ್ಚಾಗಲಿದ್ದು, ವಿದೇಶಿ ಕಚ್ಚಾತೈಲದ ಮೇಲಿನ ಭಾರತದ ಅವಲಂಬನೆ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ.

Advertisement

ಅಬಕಾರಿ ಸುಂಕ ಶೂನ್ಯಕ್ಕಿಳಿದ ಇಂಧನ ಮಾದರಿಗಳು:
ಹಣಕಾಸು ಸಚಿವಾಲಯದ ಆದೇಶದ ಪ್ರಕಾರ, ಇನ್ನು ಮುಂದೆ ಈ ಕೆಳಗಿನ ಇಥನಾಲ್ ಮಿಶ್ರಿತ ಪೆಟ್ರೋಲ್‌ಗಳ ಮೇಲೆ ಯಾವುದೇ ಅಬಕಾರಿ ಸುಂಕ ಇರುವುದಿಲ್ಲ.

ಇ೨೨ (ಶೇ. ೨೨ ಇಥನಾಲ್ ಮಿಶ್ರಣ)
ಇ೨೫ (ಶೇ. ೨೫ ಇಥನಾಲ್ ಮಿಶ್ರಣ)
ಇ೨೭ (ಶೇ. ೨೭ ಇಥನಾಲ್ ಮಿಶ್ರಣ)
ಇ೩೦ (ಶೇ. ೩೦ ಇಥನಾಲ್ ಮಿಶ್ರಣ)

ರೈತರಿಗೂ ಸಿಗಲಿದೆ ಪರೋಕ್ಷ ಲಾಭ!:
ಇಥನಾಲ್ ಅನ್ನು ಪ್ರಮುಖವಾಗಿ ಕಬ್ಬು, ಜೋಳ ಸೇರಿದಂತೆ ವಿವಿಧ ಕೃಷಿ ತ್ಯಾಜ್ಯ ಹಾಗೂ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. ಹೀಗಾಗಿ ದೇಶದಲ್ಲಿ ಇಥನಾಲ್ ಮಿಶ್ರಿತ ಇಂಧನಕ್ಕೆ ಬೇಡಿಕೆ ಹೆಚ್ಚಾದಂತೆಲ್ಲಾ ಕೃಷಿ ಕ್ಷೇತ್ರಕ್ಕೆ ಹೊಸ ಮಾರುಕಟ್ಟೆ ಸೃಷ್ಟಿಯಾಗಲಿದ್ದು, ಇದು ನೇರವಾಗಿ ದೇಶದ ರೈತರ ಆದಾಯ ವೃದ್ಧಿಗೆ ಸಹಕಾರಿಯಾಗಲಿದೆ.

ಗ್ರಾಹಕರ ಮೇಲಿನ ಹೊರೆ ಇಳಿಸಲು ಕಸರತ್ತು:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಹಾಗೂ ಜಾಗತಿಕ ಮಾರುಕಟ್ಟೆಯ ಏರಿಳಿತದಿಂದಾಗಿ ಇತ್ತೀಚೆಗೆ ಇಂಧನ ದರಗಳು ಗಗನಕ್ಕೇರಿದ್ದವು. ಮೇ ತಿಂಗಳ ದ್ವಿತೀಯಾರ್ಧದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್‌ಗೆ ಸುಮಾರು ರೂ. ೭.೫೦ ರಷ್ಟು ಏರಿಕೆಯಾಗಿತ್ತು.

ಈ ಹಿಂದೆ ಜಾಗತಿಕ ತೈಲ ಬೆಲೆ ಏರಿಕೆಯಾದಾಗಲೂ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಲೀಟರ್‌ಗೆ ರೂ. ೧೦ ರಷ್ಟು ಕಡಿತಗೊಳಿಸಿತ್ತು. ಇದರಿಂದ ಸರ್ಕಾರಕ್ಕೆ ವಾರ್ಷಿಕವಾಗಿ ರೂ. ೧ ಲಕ್ಷ ಕೋಟಿಗೂ ಅಧಿಕ ಆದಾಯ ನಷ್ಟ ಉಂಟಾಗಿದ್ದರೂ ಗ್ರಾಹಕರ ಹಿತದೃಷ್ಟಿಯಿಂದ ಆ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಇಥನಾಲ್ ಮೇಲಿನ ಸುಂಕ ಮನ್ನಾ ಮಾಡುವ ಮೂಲಕ ಗ್ರಾಹಕರಿಗೆ ಪರ್ಯಾಯ ಇಂಧನದ ಆಯ್ಕೆ ನೀಡಲಾಗುತ್ತಿದೆ.

ಒಂದೇ ಕಲ್ಲಿಗೆ ನಾಲ್ಕು ಹಕ್ಕಿ!:
ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಮೂಲಕ ಮೋದಿ ಸರ್ಕಾರ ಒಟ್ಟಿಗೆ ನಾಲ್ಕು ಪ್ರಮುಖ ಗುರಿಗಳನ್ನು ಸಾಧಿಸಲು ಮುಂದಾಗಿದೆ.

ಸ್ವಚ್ಛ ಇಂಧನ ಬಳಕೆ ಮತ್ತು ಪರಿಸರ ಮಾಲಿನ್ಯಕ್ಕೆ ಬ್ರೇಕ್.
ಕಚ್ಚಾತೈಲ ಆಮದು ವೆಚ್ಚ ತಗ್ಗಿಸಿ ಇಂಧನ ಭದ್ರತೆ ಸಾಧಿಸುವುದು.
ಕೃಷಿ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಸಿ ರೈತರ ಆದಾಯ ಹೆಚ್ಚಿಸುವುದು.
ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತನಿರ್ಮಾಣ ಮಾಡುವುದು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು