Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದ್ಯ ಮಾರಾಟಕ್ಕೆ ಯಾವುದೇ ಗುರಿ ನಿಗದಿಪಡಿಸಿಲ್ಲ- ಅಬಕಾರಿ ಸಚಿವ ತಿಮ್ಮಾಪುರ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ
, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸ್ಪಷ್ಟಪಡಿಸಿದರು.


ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು. 

    ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿಯೂ ಅವ್ಯಾಹತವಾಗಿ, ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಇದರಿಂದ ವಯಸ್ಕರು, ಮಕ್ಕಳು ಕೂಡ ಕುಡಿತದ ದಾಸರಾಗುತ್ತಿದ್ದಾರೆ.  ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ, ನಮ್ಮದು ಮಹಿಳೆಯರ ಪರ ಸರ್ಕಾರ ಎಂದು ಹೇಳುತ್ತೀರಿ, ಆದರೆ ಅಕ್ರಮ ಮದ್ಯ ಮಾರಾಟದಿಂದ ಮಹಿಳೆಯರೇ ತೊಂದರೆಗೆ ಒಳಗಾಗುತ್ತಿದ್ದಾರೆ.

ಹೀಗಾಗಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕು.  ಹೆಚ್ಚಿನ ಆದಾಯ ಸಂಗ್ರಹಿಸಲು ಇಂತಿಷ್ಟೇ ಪ್ರಮಾಣದಲ್ಲಿ ಮದ್ಯ ಮಾರಾಟ ಮಾಡಬೇಕು ಎಂದು ಗುರಿ ನಿಗದಿ ಮಾಡುವುದನ್ನು ಬಿಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರ ನೀಡಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು, ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ.  ಆದರೆ ಮದ್ಯ ಮಾರಾಟದಿಂದ ಇಂತಿಷ್ಟು ಪ್ರಮಾಣದ ಆದಾಯ ಲಭ್ಯವಾಗಬಹುದು ಎಂಬ ನಿರೀಕ್ಷೆಯನ್ನು ಮಾತ್ರ ಹೊಂದಲಾಗಿದೆ.  ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಇಲಾಖೆಯು ನಿರಂತರವಾಗಿ ದಾಳಿ ನಡೆಸಿ, ಕ್ರಮ ಕೈಗೊಳ್ಳುತ್ತಿದೆ. 

ಅಲ್ಲದೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆ ಕಾವಲು ನಡೆಸಿ, ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.  ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 721 ಅಬಕಾರಿ ದಾಳಿ ನಡೆಸಿ, 491 ಪ್ರಕರಣಗಳನ್ನು ದಾಖಲಿಸಿದ್ದು, 448 ಜನರನ್ನು ದಸ್ತಗಿರಿ ಮಾಡಲಾಗಿದೆ. 

641 ಲೀ. ಅಕ್ರಮ ಮದ್ಯ ವಶಪಡಿಸಿಕೊಂಡಿದ್ದು, 16 ವಾಹನಗಳನ್ನು ಜಪ್ತಿ ಮಾಡಿ, 12.69 ಲಕ್ಷ ರೂ. ದಂಡ ವಿಧಿಸಲಾಗಿದೆ.  ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ತಿಮ್ಮಾಪುರ ಭರವಸೆ ನೀಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ