ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಬೃಹತ್ ಬೆಂಗಳೂರು ಪ್ರಾಧಿಕಾರ ಸಬಲೀಕರಣ ಹಾಗೂ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಸುಸಜ್ಜಿತ ನಗರಾಡಳಿತ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 2ನೇ ಉನ್ನತ ಮಟ್ಟದ ಸಭೆ ಯಶಸ್ವಿಯಾಗಿ ಜರುಗಿತು.
ಈ ಮಹತ್ವದ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿ, ರಾಜಧಾನಿಯ ಸರ್ವತೋಮುಖ ಅಭಿವೃದ್ಧಿ ಕುರಿತು ಕೂಲಂಕಷ ಚರ್ಚೆ ನಡೆಸಿದರು.
ಉತ್ತಮ ಸಮನ್ವಯತೆ: ವಿವಿಧ ಸರ್ಕಾರಿ ಇಲಾಖೆಗಳ ನಡುವೆ ಹಚ್ಚಿನ ಸಮನ್ವಯತೆ ಸಾಧಿಸಿ, ಅಭಿವೃದ್ಧಿ ಯೋಜನೆಗಳು ಶೀಘ್ರವಾಗಿ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳುವುದು.
ಸುಧಾರಿತ ನಗರಾಡಳಿತ: ನಗರದ ಮೂಲಸೌಕರ್ಯ, ಸಂಚಾರ ದಟ್ಟಣೆ ನಿಯಂತ್ರಣ ಮತ್ತು ತ್ಯಾಜ್ಯ ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ ಹಾಗೂ ಉತ್ತಮ ಆಡಳಿತ ಮಾದರಿಯನ್ನು ಅಳವಡಿಸಿಕೊಳ್ಳುವುದು.
ಯೋಜನಾಬದ್ಧ ಅಭಿವೃದ್ಧಿ: ಭವಿಷ್ಯದ ಅಗತ್ಯಗಳಿಗೆ ತಕ್ಕಂತೆ ಬೆಂಗಳೂರು ನಗರವನ್ನು ಯೋಜನಾಬದ್ಧವಾಗಿ ವಿಸ್ತರಿಸುವುದು ಮತ್ತು ಆಡಳಿತ ಯಂತ್ರಕ್ಕೆ ಹೊಸ ವೇಗ ನೀಡುವುದು.
ಬೆಂಗಳೂರನ್ನು ಜಾಗತಿಕ ಮಟ್ಟದ ಸುಸಜ್ಜಿತ ನಗರವನ್ನಾಗಿ ನಿರ್ಮಿಸಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಕಾರ್ಯಾಚರಿಸಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.




