Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ ಸಮೀಕ್ಷಾ ಕಾರ್ಯ ಅವಧಿ ಮೇ. 28 ರವರೆಗೆ ವಿಸ್ತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಇದೇ ಮೇ. 28 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

       ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ. 05 ರಿಂದ ಆರಂಭಗೊಂಡಿದ್ದು, ಸರ್ಕಾರದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಮೇ.16ರಂದು ಜರುಗಿದ ವಿಡಿಯೋ ಸಂವಾದ ಸಭೆಯಲ್ಲಿ ಸೂಚನೆ ನೀಡಿರುವಂತೆ, ಇದೀಗ ಸಮೀಕ್ಷಾ ಕಾರ್ಯವನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ.   ಹಿಂದಿನ ವೇಳಾಪಟ್ಟಿಯಂತೆ ಒಟ್ಟಾರೆ ಸಮೀಕ್ಷಾ ಕಾರ್ಯ ಮೇ. 23 ರವರೆಗೆ ನಡೆಸಬೇಕಾಗಿತ್ತು.  ಇದೀಗ ಮೇ. 28 ರವರೆಗೆ ಅವಧಿ ವಿಸ್ತರಿಸಲಾಗಿದೆ.  

     ಪರಿಷ್ಕø ವೇಳಾಪಟ್ಟಿಯಂತೆ ಮೊದಲನೆ ಹಂತದಲ್ಲಿ ಮನೆ ಮನೆ ಭೇಟಿ ನೀಡಿ ಕೈಗೊಳ್ಳುವ ಸಮೀಕ್ಷಾ ಕಾರ್ಯವು ಮೇ. 25 ರವರೆಗೆ ಜರುಗಲಿದೆ.  ಎರಡನೆ ಹಂತದಲ್ಲಿ, ಸಮೀಕ್ಷೆ ಬ್ಲಾಕ್ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಮೇ. 28 ರವರೆಗೆ ಜರುಗಲಿದ್ದು, ಮೂರನೆ ಹಂತದಲ್ಲಿ ಸ್ವಯಂ ಘೋಷಣೆ ಮಾಡಿ, ಆನ್ಲೈನ್ ಮೂಲಕ ಸಮೀಕ್ಷೆ ಕಾರ್ಯವು ಮೇ. 28 ರವರೆಗೆ ಜರುಗಲಿದೆ.

    ಪರಿಷ್ಕø ವೇಳಾಪಟ್ಟಿಯನ್ವಯ ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ