Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದಯಾನಿಲಯದಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕೃಷಿಕರಿಗಾಗಿ ಎರಡು ಡಿಪ್ಲೊಮಾ ಮತ್ತು ಐದು ಸರ್ಟಿಫಿಕೇಟ್ ಕೋರ್ಸ್ಗಳಿಗಾಗಿ  ಅರ್ಜಿಗಳನ್ನು ಆಹ್ವಾನಿಸಿ ಅರ್ಜಿ ಸಲ್ಲಿಸಲು 2025ನೇ ಏಪ್ರಿಲ್ 12 ಅಂತಿಮ ದಿನ ನಿಗದಿಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸದರಿ ದಿನಾಂಕವನ್ನು 2025ನೇ ಮೇ 3 ವರೆಗೆ ವಿಸ್ತರಿಸಲಾಗಿದೆ.

ಡಿಪ್ಲೊಮಾ ಕೋರ್ಸ್ಗಳಾದ ಒಂದು ವರ್ಷದ ಡಿಪ್ಲೊಮಾ (ಕೃಷಿ) ಕೋರ್ಸ್ಗೆ ಶುಲ್ಕ ರೂ.10,000/- ಗಳಿದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಮತ್ತು ಒಂದು ವರ್ಷದ ಸ್ನಾತಕೋತ್ತರ ಕೃಷಿ ಡಿಪ್ಲೊಮಾ (PGDA) ಕೋರ್ಸ್ಗೆ ಕೋರ್ಸ್ ಶುಲ್ಕ ರೂ.12,000/- ಗಳಿದ್ದು, ಕೃಷಿ ಪದವೀಧರರು ಅರ್ಜಿ ಸಲ್ಲಿಸಬಹುದು.

ಸರ್ಟಿಫಿಕೇಟ್ ಕೋರ್ಸ್ಗಳಾದ ಕೃಷಿಯಲ್ಲಿ ಬೀಜೊತ್ಪಾದನೆ ತಾಂತ್ರಿಕತೆಗಳು ಕೋರ್ಸ್ಗೆ ಕೋರ್ಸ್ ಶುಲ್ಕ ರೂ. 3000/- ಮತ್ತು ಕೃಷಿಯಲ್ಲಿ ಯಂತ್ರೋಪಕರಣಗಳ ನಿರ್ವಹಣೆ ಕೋರ್ಸ್ಗೆ ಕೋರ್ಸ್ ಶುಲ್ಕ ರೂ.3000/- ಗಳಿದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ಜೇನುಸಾಕಣೆ ಕೋರ್ಸ್ಗೆ ಕೋರ್ಸ್ ಶುಲ್ಕ ರೂ. 3000/- ಮತ್ತು ಸಮಗ್ರ ಕೃಷಿ ಕೋರ್ಸ್ಗೆ ಕೋರ್ಸ್ ಶುಲ್ಕ ರೂ.1500/- ಗಳಿದ್ದು, 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಸಾವಯವ ಕೃಷಿ (ಅಂಚೆ ಶಿಕ್ಷಣ) ಕೋರ್ಸ್ಗೆ ಕೋರ್ಸ್ ಶುಲ್ಕ ರೂ.200/-ಗಳಿದ್ದು, ಓದು ಬರಹ ಬಲ್ಲವರುಅರ್ಜಿ ಸಲ್ಲಿಸಬಹುದು.

ಪ್ರತಿಕೋರ್ಸ್ಗೆ ಅರ್ಜಿ ಶುಲ್ಕ ರೂ.100/- ರಂತೆ ಪಾವತಿಸಿ ದೂರ ಶಿಕ್ಷಣ ಘಟಕ, ರೈತ ತರಬೇತಿ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ, ಜಿಕೆವಿಕೆ, ಬೆಂಗಳೂರು-560065 ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕಾರ್ಯವ್ಯಾಪ್ತಿಯಲ್ಲಿ ಬರುವಂತಹ ಕೃಷಿ ವಿಜ್ಞಾನ ಕೇಂದ್ರಗಳಾದ ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಾಗೂ ವಿಸ್ತರಣಾ ಶಿಕ್ಷಣ ಘಟಕ, ಮೈಸೂರಿನಲ್ಲಿ ಅರ್ಜಿಗಳನ್ನು ಪಡೆಯಬಹುದು ಅಥವಾ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಾಲತಾಣ www.uasbangalore.edu.in ಡೌನ್ಲೋಡ್ ಮಾಡಿಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಕೋರ್ಸ್ ಶುಲ್ಕವನ್ನು ಡಿ.ಡಿ. ಮೂಲಕ  COMPTROLLER, UAS, GKVK, BANGALORE-560065 ಇವರ ಹೆಸರಿನಲ್ಲಿ ಪಡೆದು 2025ನೇ ಮೇ 3 ಮಧ್ಯಾಹ್ನ 12.30 ಗಂಟೆಯ ಒಳಗಾಗಿ ಸಂಯೋಜಕರು ಮತ್ತು ಮುಖ್ಯಸ್ಥರು, ದೂರ ಶಿಕ್ಷಣ ಘಟಕ, ರೈತ ತರಬೇತಿ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ, ಕೃ.ವಿ.ವಿ., ಜಿಕೆವಿಕೆ, ಬೆಂಗಳೂರು-560065 ರವರಿಗೆ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-23636353ಗೆ ಸಂಪರ್ಕಿಸಬಹುದು ಎಂದು ಹಿರಿಯ ವಾರ್ತಾ ತಜ್ಞರು ಮತ್ತು ಮುಖ್ಯಸ್ಥರಾದ ಕೆ.ಸಿ.ರಘುಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು