Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿಯನ್ನು ನಗರಾಭಿವೃದ್ಧಿ ಇಲಾಖೆ ನೀಡಿದ್ದು ಶೇ.5ರಷ್ಟು ರಿಯಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾವತಿಸಲು ಮೇ-31ರೊಳಗೆ ಪಾವತಿಸುವಂತೆ ಅವಧಿ ವಿಸ್ತರಣೆ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಎನ್.ಕೆ ಲಕ್ಷ್ಮೀ ಸಾಗರ್ ಏಪ್ರಿಲ್-29ರಂದು ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಆಸ್ತಿದಾರರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್​ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ.

ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.ಸರ್ಕಾರದ ಆದೇಶ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ ಇತರೆ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಲು ಅವಧಿ ವಿಸ್ತರಣೆ ಮಾಡಿಲ್ಲ. ಈಗಾಗಲೇ ಈ ವ್ಯಾಪ್ತಿಯ ಕಚೇರಿಗಳಲ್ಲಿ ಆಸ್ತಿಗಳು ಮಾಲೀಕರು ದಿನವೀಡಿ ಕಚೇರಿಗಳ ಮುಂದೆ ಕಾಯುತ್ತಿರುತ್ತಾರೆ.



ಸರ್ವರ್ ಸಮಸ್ಯೆ ಸೇರಿದಂತೆ ಮತ್ತಿತರ ಕಾರಣಗಳಿಂದ ಆನ್ ಲೈನ್ ನಲ್ಲಿ ತೆರಿಗೆ ಪಾವತಿ ಆಗುವುದು ವಿಳಂಬ ಆಗುತ್ತಿದೆ. ಇದರಿಂದ ಸಾಕಷ್ಟು ಆಸ್ತಿ ತೆರಿಗೆದಾರರು ಕಚೇರಿಗಳ ಮುಂದೆ ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಅವಕಾಶ ನೀಡದಂತೆ ಮೇ-31ರತನಕ ಶೇ.5ರಷ್ಟು ರಿಯಾಯಿತಿ ಸಹಿತ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ