Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ
IISC, IIT ಮತ್ತು NIT  ಮೂಲಕ  Artitifical Inteligence and Machine Learning ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

6 ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಮಾಸಿಕ ರೂ.15.000/-ಗಳ ಶಿಷ್ಯವೇತನ /ತರಬೇತಿ ನೀಡುವ ಸಂಬಂಧ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಶಿಷ್ಯವೇತನ ನೀಡಲಾಗುತ್ತದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಗಳಲ್ಲಿ ಬಿ.ಇ/ಬಿ.ಟೆಕ್ ಕೋರ್ಸ್ಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಶಿಷ್ಯವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದ ಒಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ಬಿ.ಇ/ಬಿ.ಟೆಕ್ ಕೋರ್ಸ್ಗಳಲ್ಲಿ ಕನಿಷ್ಟ ಶೇ.55% ರಷ್ಟು ಕಡ್ಡಾಯವಾಗಿ ಅಂಕ ಗಳಿಸಿರಬೇಕು ಕೋರ್ಸ್ ಅವಧಿಯು ಗರಿಷ್ಠ 2 ವಾರಗಳಾಗಿರುತ್ತದೆ.

ಅಭ್ಯರ್ಥಿಯ ಕುಟುಂಬ ಆದಾಯ ರೂ.5.00 ಲಕ್ಷಗಳನ್ನು ಮೀರಿರಬಾರದು. ಮೂಲನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ ಸೂಕ್ಷ್ಮ/ ಅತೀ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ವಿದ್ಯಾರ್ಥಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. IISc IIT ಮತ್ತು NIT ಸಂಸ್ಥೆಗಳ ಹೊರತುಪಡಿಸಿ ಬೇರೆ ವಿದ್ಯಾಸಂಸ್ಥೆಗಳಲ್ಲಿ ತರಬೇತಿ ಪಡೆಯಲು ಅಭ್ಯರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ಏಪ್ರಿಲ್ 25 ಕೊನೆಯ ದಿನ, ನಂತರ ಬಂದ ಅರ್ಜಿಗಳನ್ನು ಪರಿಗಣಸಲಾಗುವುದಿಲ್ಲ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ ಸಂ- 080-29787448 ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ