Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳು ಜಾತಿ ಪ್ರಮಾಣ, ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಿ- ಮುಖ್ಯಮಂತ್ರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.


ವಿಧಾನಸೌಧ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡುತ್ತಾ, ಬಾಕಿಯಿರುವ ಬ್ಯಾಕ್‍ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‍ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.


ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.  ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10 ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೆÇಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪೆÇಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು:
2023
ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6635 ಪ್ರಕರಣಗಳು ದಾಖಲಾಗಿವೆ. ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4912 ಪ್ರಕರಣಗಳು. 60 ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4149 ಪ್ರಕರಣಗಳಲ್ಲಿ ಮಾತ್ರ. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ. ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು?
ಆಯಾ ವರ್ಷಗಳಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.


ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ.

ಪ್ರಸ್ತುತ  ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಲು ಸೂಚಿಸಿದರು.


ರಾಜ್ಯದಲ್ಲಿ 33 ಡಿಸಿಆರ್‍ಇ ಪಲೀಸ್ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‍ಐಆರ್ ದಾಖಲಿಸಬೇಕು ಎಂದು ಸೂಚನೆ ನೀಡಿದರು.


ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಸೂಚನೆ ನೀಡಿದರು. 


ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.


ಇದೇ ಸಂದರ್ಭದಲ್ಲಿ ದೌಜ್ರ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು
ಸಭೆಯಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ,

ಅಬಕಾರಿ ಇಲಾಖೆ ಸಚಿವರಾದ ಆರ್.ಬಿ.ತಿಮ್ಮಾಪುರ್, ಶಾಸಕರಾದ ಎ.ಸಿ.ಶ್ರೀನಿವಾಸ್, ಎಚ್.ವಿ.ವೆಂಕಟೇಶ್, ಸುಧಾಮ್ ದಾಸ್, ಎ.ಆರ್.ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್ ಸಿದ್ದಿ, ಬಸವರಾಜ್, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್, ರಾಜು ವೇಣುಗೋಪಾಲ ನಾಯಕ್, ಡಾ.ಉಮೇಶ್ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ