Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರಸಿದ್ಧ ಗಾಯಕಿ ಡಾ. ಮೈಸೂರು ನಾಗಮಣಿ ಶ್ರೀನಾಥ್‌ಗೆ ಮೈಸೂರು ದಸರಾ 'ಸಂಗೀತ ವಿದ್ವಾನ್‌' ಪ್ರಶಸ್ತಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಪ್ರತಿ ವರ್ಷ ನಾಡಹಬ್ಬ ಮೈಸೂರು ದಸರಾ ಉತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಪ್ರತಿಷ್ಠಿತ
'ರಾಜ್ಯ ಸಂಗೀತ ವಿದ್ವಾನ್‌' ಪ್ರಶಸ್ತಿಗೆ ಈ ಬಾರಿ ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಡಾ. ಮೈಸೂರು ನಾಗಮಣಿ ಶ್ರೀನಾಥ್‌ಆಯ್ಕೆಯಾಗಿದ್ದಾರೆ. 

 ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮಾಧ್ಯಮ ಪ್ರಕಟಣೆ ಮೂಲಕ ಈ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Advertisement

 ಪಂಡಿತ್‌ಫಯಾಜ್‌ಖಾನ್‌ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಈ ಪ್ರಶಸ್ತಿಗೆ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಡಾ. ಮೈಸೂರು ನಾಗಮಣಿ ಶ್ರೀನಾಥ್‌ಅವರ ಸಾಧನೆ ಮತ್ತು ಹಿನ್ನೆಲೆ:   ಸಂಗೀತ ಸೇವೆ: ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಮುದ್ರೆ ಒತ್ತಿರುವ ಇವರು, ಮೈಸೂರು ವಿಶ್ವವಿದ್ಯಾನಿಲಯದ ಸಂಗೀತ ವಿಭಾಗದ ಮುಖ್ಯಸ್ಥರಾಗಿ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ರಚನೆಗಳು ಮತ್ತು ಶಿಕ್ಷಣ: ಸ್ವತಃ ನೂರಕ್ಕೂ ಹೆಚ್ಚು ಶಾಸ್ತ್ರೀಯ ಕೃತಿಗಳು ಮತ್ತು ವರ್ಣಗಳನ್ನು ರಚಿಸಿದ್ದಾರೆ. ಅಲ್ಲದೆ, "ಸುನಾದ ಕಲ್ಚರಲ್‌ಸೆಂಟರ್‌" ಸಂಗೀತ ಶಾಲೆಯ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಸಂಗೀತ ತರಬೇತಿ ನೀಡಿ ಮಾರ್ಗದರ್ಶನ ಮಾಡುತ್ತಿದ್ದಾರೆ. 

 ಪ್ರಮುಖ ಪ್ರಶಸ್ತಿಗಳು: ಇವರ ಕಲಾಸೇವೆಗೆ ಈಗಾಗಲೇ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಗೌರವಗಳು ಸಂದಿವೆ.

   ಸಂಗೀತ ಲೋಕಕ್ಕೆ ಇವರು ನೀಡಿರುವ ಗಣನೀಯ ಕೊಡುಗೆಯನ್ನು ಪರಿಗಣಿಸಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ