ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಭೂದಾಖಲೆಗಳ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿರುವ ಬಿ.ರಾಮಾಂಜನೇಯ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಜೂನ್ 01ರಂದು ಸಂಜೆ 5.30ಕ್ಕೆ ಚಿತ್ರದುರ್ಗ ನಗರದ ಎನ್.ಹೆಚ್-48ರ ಸರ್ವೀಸ್ ರಸ್ತೆಯಲ್ಲಿರುವ ಕೆಇಬಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತ ವೆಂಕಟರಾಜ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂ ದಾಖಲೆಗಳ ಹೆಚ್ಚುವರಿ ನಿರ್ದೇಶಕ ಕೆ.ಜಯಪ್ರಕಾಶ್,
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಬೆಂಗಳೂರು ವಿಭಾಗ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕ ಎಸ್.ನಿಸಾರ್ ಅಹ್ಮದ್ ಭಾಗವಹಿಸುವರು. ಚಿತ್ರದುರ್ಗ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಏಕನಾಥ್ ವಿ.ಆರ್.ಎಂ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Also read



