Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಂಬಾಕಿಗೆ ಬೆಂಬಲ ಬೆಲೆ ಕೊಡಿಸಲು ಗೌಡರಿಗೆ ಮನವಿ ಸಲ್ಲಿಸಿದ ರೈತರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಣಿಜ್ಯ ಬೆಳೆ ತಂಬಾಕಿಗೆ ಸಮರ್ಪಕ ಬೆಂಬಲ ಬೆಲೆ ಮತ್ತು ತಂಬಾಕು ಬೆಳೆಗಾರರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ  ಮಂಗಳವಾರ ನವದೆಹಲಿಯಲ್ಲಿ ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಮಂತ್ರಿ ಮತ್ತು ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ ಅವರನ್ನು ಹುಣಸೂರು ಕ್ಷೇತ್ರದ ಶಾಸಕರಾದ ಜಿ.ಡಿ. ಹರೀಶ್ ಗೌಡ ಅವರು ರೈತರೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.


ಈ ಕುರಿತು ವಾಣಿಜ್ಯ ಸಚಿವರು ಹಾಗೂ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಮುಂದಿನ ಕ್ರಮ ವಹಿಸುವುದಾಗಿ ಹೆಚ್. ಡಿ ದೇವೇಗೌಡರು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ರೈತರ ನಿಯೋಗ ಮನವಿ ಸಲ್ಲಿಸಿತು.

ಅನ್ಯ ರಾಜ್ಯಗಳ ತಂಬಾಕು ಬೆಳೆಗಾರರಿಗೆ ಹೋಲಿಸಿದರೆ ರಾಜ್ಯದ ಬೆಳೆಗಾರರು ಬಹಳ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಹಾಗೂ ಬೆಳೆಗಾರರ ಜೀವನೋಪಾಯದ ದೃಷ್ಟಿಯಿಂದ ತಂಬಾಕಿಗೆ ಸೂಕ್ತ ಬೆಲೆ ನಿಗದಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವರಲ್ಲಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಜತೆಯಲ್ಲಿ ಇದ್ದು, ತಂಬಾಕು ಬೆಳೆಗಾರರ ಸಂಕಷ್ಟದ ಬಗ್ಗೆ ಮಾನ್ಯ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಮೈಸೂರು ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್
,



ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್, ಪಿರಿಯಾಪಟ್ಟಣದ ರೈತ ಮುಖಂಡ ಪ್ರಸನ್ನ ಅವರು ಸೇರಿದಂತೆ ಹುಣಸೂರು ಭಾಗದ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ