Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರಿನಲ್ಲಿ ರೈತರ ಕುಂದುಕೊರತೆ ಸಭೆ: ವಿವಿಧ ಇಲಾಖೆಗಳಿಂದ ಸ್ಥಳದಲ್ಲೇ ಪರಿಹಾರ

​ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು ಸಭಾಂಗಣದಲ್ಲಿ ಬುಧವಾರ ರೈತರ ಕುಂದುಕೊರತೆ ಸಭೆಯನ್ನು ಹಿರಿಯೂರು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಭೆಯಲ್ಲಿ ವಿವಿಧ ರೈತರಿಂದ ಅಹವಾಲುಗಳನ್ನು ಸ್ವೀಕರಿಸಿ
, ಸಂಬಂಧಪಟ್ಟ ಇಲಾಖೆಗಳ ಮೂಲಕ ಸ್ಥಳದಲ್ಲೇ ಪರಿಹಾರ ಒದಗಿಸಲಾಯಿತು. 

​ ​ಗುಣಮಟ್ಟದ ಕೃಷಿ ಪರಿಕರಗಳಿಗೆ ಆಗ್ರಹ:
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಹೊರಕೇರಪ್ಪ ಅವರು ಮಾತನಾಡಿ
, ಕೃಷಿ ಇಲಾಖೆಯಿಂದ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದರು. ಜೊತೆಗೆ, ಎಲ್ಲಾ ರಸಗೊಬ್ಬರ ಮಳಿಗೆಗಳಲ್ಲಿ ಕಡ್ಡಾಯವಾಗಿ ದರಪಟ್ಟಿಯನ್ನು ಪ್ರದರ್ಶಿಸುವಂತೆ ಮಳಿಗೆ ಮಾಲೀಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ಕೋರಿದರು. 

Advertisement

​ಮೊಬೈಲ್ ಆಪ್ ಮೂಲಕ ರಸಗೊಬ್ಬರ ವಿತರಣೆ:
ಚಳ್ಳಕೆರೆಯ ಉಪ ಕೃಷಿ ನಿರ್ದೇಶಕರು-2 ಆದ ಶ್ರೀ ಉಮೇಶ್ ಅವರು ಮಾಹಿತಿ ನೀಡಿ
, ಈ ವರ್ಷದಿಂದ ರಸಗೊಬ್ಬರವನ್ನು 'ಎಫ್.ಎಫ್.ಎಸ್' ಮೊಬೈಲ್ ಆಪ್ ಮೂಲಕ ವಿತರಿಸಲಾಗುತ್ತಿದ್ದು, ಇದಕ್ಕೆ ರೈತರು ಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. 

​12.5 ಕೋಟಿ ರೂ. ಬೆಳೆವಿಮೆ ಪಾವತಿ:
ಹಿರಿಯೂರಿನ ಸಹಾಯಕ ಕೃಷಿ ನಿರ್ದೇಶಕರಾದ ಅಶೋಕ್ ಜೆ. ಅವರು 2025-26ನೇ ಸಾಲಿನ ಬೆಳೆವಿಮೆ ನೊಂದಣಿ ಮತ್ತು ಕ್ಷೇಮು ಪಾವತಿಯ ವಿವರ ನೀಡಿ
, ತಾಲ್ಲೂಕಿನಲ್ಲಿ ಶೇಂಗಾ ಮತ್ತು ಸೂರ್ಯಕಾಂತಿ ಬೆಳೆಗಳನ್ನು ಬೆಳೆದ ರೈತರಿಗೆ ಈಗಾಗಲೇ ಒಟ್ಟು 12.5 ಕೋಟಿ ರೂಪಾಯಿಗಳ ಬೆಳೆವಿಮೆಯನ್ನು ಪಾವತಿಸಲಾಗಿದೆ ಎಂದು ತಿಳಿಸಿದರು. 

​ಸಭೆ ಬಹಿಷ್ಕರಿಸಿದ ರೈತ ಸಂಘದ ಜಿಲ್ಲಾಧ್ಯಕ್ಷರು
​ತೊಗರಿ ಮತ್ತು ಕಡಲೆ ಬಿತ್ತನೆ ಬೀಜಗಳನ್ನು ಖರೀದಿ ಮಾಡಲು
'ಈಶ ರೈತ ಉತ್ಪಾದಕ ಸಂಸ್ಥೆ'ಗೆ ಸರ್ಕಾರ ನೀಡಿರುವ ಅನುಮತಿಯನ್ನು ತೀವ್ರವಾಗಿ ವಿರೋಧಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಟಿ. ತಿಪ್ಪೇಸ್ವಾಮಿ ಅವರು, ಈ ಅನುಮತಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಮನವಿ ಸಲ್ಲಿಸಿದರು. ತಮ್ಮ ಬೇಡಿಕೆಗೆ ಒತ್ತಾಯಿಸಿ ಅವರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು. 

​ಅಧಿಕಾರಿಗಳಿಗೆ ತಹಶೀಲ್ದಾರರ ಖಡಕ್ ಸೂಚನೆ
​"ಎಲ್ಲಾ ಇಲಾಖೆಗಳು ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಸಕಾಲದಲ್ಲಿ ಮಾಹಿತಿ ನೀಡಿ
, ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ತಲುಪಿಸಬೇಕು." ಸಿದ್ದೇಶ್, ತಹಶೀಲ್ದಾರರು, ಹಿರಿಯೂರು. 

​ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿರಿಯೂರು ತಹಶೀಲ್ದಾರ್ ಸಿದ್ದೇಶ್ ಅವರು ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಈ ಮೇಲಿನಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ, ಸಭೆಯಲ್ಲಿ ಸ್ವೀಕೃತವಾದ ಎಲ್ಲಾ ಅಹವಾಲು ಅರ್ಜಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿ ಸಭೆಯನ್ನು ಮುಕ್ತಾಯಗೊಳಿಸಿದರು. 

​ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಪರಶುರಾಮ ಚಂದ್ರುವಂಶಿ, ಕೃಷಿಕ ಸಮಾಜದ ನಿರ್ದೇಶಕ ಹೆಚ್.ಆರ್. ತಿಮ್ಮಯ್ಯ, ವಿವಿಧ ರೈತ ಮುಖಂಡರುಗಳು ಹಾಗೂ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು