Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಕೇನಹಳ್ಳಿ ಡ್ಯಾಮ್ ನಿರ್ಮಾಣಕ್ಕೆ ರೈತರ ವಿರೋಧ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾಸಲು ಹೋಬಳಿ ಲಕ್ಕೇನಹಳ್ಳಿಯಲ್ಲಿ  ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣವಾಗುತ್ತಿದ್ದು ಇದನ್ನು ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ತಾಲೂಕು ಕಚೇರಿಯ ಮುಂದೆ ಬೃಹತ್ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರು ಮಾತನಾಡಿ ಎತ್ತಿನ ಹೊಳೆ ಉದ್ದೇಶಿತ ಲಕ್ಕೇನಹಳ್ಳಿ ಡ್ಯಾಮ್ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.   ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿತಾಯಿಯನ್ನೇ ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ಮಾಡಿ‌ನಮ್ಮ‌ಬದುಕನ್ನು‌ನಾಶ ಮಾಡಲು‌ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಈ‌ಸಭೆಯಲ್ಲಿ ಅವರು ಹೇಳಿದ ಮಾತುಗಳನ್ನು ನಾವು ಕೇಳಿದ್ದೇವೆ ಅಷ್ಟೆ, ನಮ್ಮ ಮಾತು, ನಮ್ಮ ಅಹವಾಲನ್ನು ಅವರು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುತ್ತಿರುವ ಲಕ್ಕೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಮಾತನಾಡಿ, ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST