Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ರೈತರ ಬಾರಿ ವಿರೋಧ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ.


ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿಸಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ. 

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆ ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿ ತಾಯಿಯನ್ನು ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ ಮಾಡಿ‌ ನಮ್ಮ‌ ಬದುಕನ್ನು‌ ನಾಶ ಮಾಡಲು‌ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು.

ಈ‌ ಸಭೆಯಲ್ಲಿ ಅವರು ಹೇಳಿದ ಮಾತುಗಳು ನಾವು ಕೇಳಿದ್ದೇವೆ ಅಷ್ಟೆ ನಮ್ಮ ಮಾತು, ನಮ್ಮ ಅಹವಾಲು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ