Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಭೂ ಸ್ವಾಧೀನ ವಿರೋಧಿಸಿ ಸಚಿವರಿಗೆ ಮನವಿ ಸಲ್ಲಿಸಿದ ರೈತರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆನೇಕಲ್ ತಾಲ್ಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದ ಜೊತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿಗಳಾದ  ಎಂ.ಬಿ  ಪಾಟೀಲರನ್ನು ಭೇಟಿಯಾಗಿ ಪ್ರಸ್ತುತ ಸರ್ಜಾಪುರ ಹೋಬಳಿಯಲ್ಲಿ ಕೆ.ಐ.ಎ.ಡಿ.ಬಿ ವತಿಯಿಂದ ನಡೆಯುತ್ತಿರುವ ಭೂ ಸ್ವಾಧೀನದ ಕುರಿತು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಚರ್ಚೆ ನಡೆಸಿದರು.

ಆನೇಕಲ್ ಶಾಸಕ ಶಿವಣ್ಣ, ವಿಧಾನಪರಿಷತ್ ಸದಸ್ಯರಾದ ಗೋಪಿನಾಥರೆಡ್ಡಿ, ಆರ್.ಕೆ ರಮೇಶ್ ಇತರೇ ಮುಖಂಡರು, ಸಮಿತಿಯ ಅಧ್ಯಕ್ಷರು, ಮಾರ್ಗದರ್ಶಕರು, ಕಾರ್ಯದರ್ಶಿಗಳು, ಸಂಚಾಲಕರು, ಹೋರಾಟಗಾರರು, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಆನೇಕಲ್ ತಾಲ್ಲೂಕಿನಲ್ಲಿ ಅನೇಕ ದಶಕಗಳಿಂದ ಕೈಗಾರಿಕೆಗಳಿಗೆ ಮತ್ತು ವಸತಿ ಯೋಜನೆಗಳಿಗೆ ಸಾವಿರಾರು ಎಕರೆ ಭೂಮಿ ಈಗಾಗಲೇ ಸ್ವಾಧೀನಗೊಂಡಿದ್ದು, ಈ ಹಿಂದೆ ಡಿಸೆಂಬರ್ 2024ರಲ್ಲಿ ರೈತರ ನಿಯೋಗ ನನ್ನನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರೈತರ ಮನೆಗಳು, ಪಾಲಿಹೌಸ್, ಫಲವತ್ತಾದoತಹ ಕೃಷಿ ಮತ್ತು ತೋಟಗಾರಿಕಾ ಭೂಮಿಗಳನ್ನು ಭೂಸ್ವಾಧೀನದಿಂದ ಕೈ ಬಿಡಬೇಕೆಂದು ಕೈಗಾರಿಕಾ ಮಂತ್ರಿಗಳಿಗೆ ಪತ್ರ ಮುಖೇನ ಒತ್ತಾಯಿಸಿದ್ದೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. 

ಜೊತೆಗೆ, 2006 ರಲ್ಲಿ ಆನೇಕಲ್ ತಾಲ್ಲೂಕಿನ ಹೆನ್ನಾಗರ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ KIADB ಸಂಸ್ಥೆಯು 1260 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯುವ ನಿಟ್ಟಿನಲ್ಲಿ ರೈತರಿಗೆ ನಾನು ಸಹಕರಿಸಿದ್ದೆ.


ರೈತರ ಕಲ್ಯಾಣ ನಮ್ಮ ಸರ್ಕಾರದ ಆದ್ಯತೆಯಾಗಿದ್ದು ಆನೇಕಲ್ ತಾಲ್ಲೂಕಿನ ರೈತರ ಹಕ್ಕು-ಹಿತಗಳ ಪರವಾಗಿ ನಾನು ಸಹ ಸದಾ ಬೆಂಬಲವಾಗಿ ನಿಂತಿದ್ದೇನೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು