Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿಯ ಅಗಲಿಕೆಯ ನೋವು ತಾಳಲಾರದೆ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಪತ್ನಿಯ ಅಗಲಿಕೆಯ ನೋವು ತಾಳಲಾರದೆ
ತನ್ನಿಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಜರುಗಿದೆ.
ಇಬ್ಬರು ಮಕ್ಕಳನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ ಉದಯ್​ (
35), ಮಕ್ಕಳಾದ ಸಿಂಧುಶ್ರೀ (06) ಹಾಗೂ ಶ್ರೀಜಯ್ (04) ಮೃತಪಟ್ಟ ದುರ್ಧೈವಿಗಳು.

ಏನಿದು ಪ್ರಕರಣ-
ದಾವಣಗೆರೆ ಎಸ್​ಪಿಎಸ್​ ನಗರದ ಉದಯ್ ಅವರು​ ರಾಣೇಬೆನ್ನೂರು ಮೂಲದ ಹೇಮಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು
, ಅನ್ಯೋನ್ಯವಾಗಿ ಸಂಸಾರ ನಡೆಸುತ್ತಿದ್ದರು. ಇದರ ಮಧ್ಯ ಪತ್ನಿ ಹೇಮಾ ಅನಾರೋಗ್ಯಕ್ಕೆ ತುತ್ತಾಗಿ 8 ತಿಂಗಳ ಹಿಂದೆ ಸಾವನ್ನಪ್ಪಿದ್ದರು.

ಈ ದುರ್ಘಟನೆಯಿಂದ ಹೊರಬರಲಾರದ ಪತಿ ಉದಯ್​ ಮಕ್ಕಳನ್ನು ಕರೆದುಕೊಂಡು ಆಗಾಗ ಪತ್ನಿ ಸಮಾಧಿ ಬಳಿ ತೆರಳುತ್ತಿದ್ದರು. ಮನೆಯವರು ಎಷ್ಟೇ ಬುದ್ದಿ ಹೇಳಿದರೂ ಸರಿಹೋಗದ ಉದಯ್​ ಕೆಲಸಕ್ಕೂ ತೆರಳದೇ ಸಂಜೆ ವೇಳೆ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಕುಟುಂಬಸ್ಥರು ನೋವು ತೋಡಿಕೊಂಡಿದ್ದಾರೆ.

ನಾನು ಸತ್ತರೆ ಜೊತೆಗೆ ಮಕ್ಕಳನ್ನು ಕರೆತರುವೆ ಎಂದು ಉದಯ್ ಪದೇ ಪದೇ ಎನ್ನುತ್ತಿದ್ದ. ಉದಯ್ ಪತ್ನಿ ಹೇಮಾ ಅನಾರೋಗ್ಯದಿಂದ ಸಾವನಪ್ಪಿದ್ದರು. ಅದೇ ನೆನಪಿನಲ್ಲಿ ಉದಯ್ ಖಿನ್ನತೆಗೆ ಒಳಗಾಗಿದ್ದ. ಈಗ ತನ್ನ ಮಕ್ಕನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದು ದುರಂತ. ಪದೇ ಪದೇ ಮೃತ‌ಹೆಂಡತಿ ಹೇಮಾ ಸಮಾಧಿ ಬಳಿ ಮಕ್ಕಳನ್ನು ಕರೆದೊಯ್ಯುತ್ತಿದ್ದ. ಅವನಿಗೆ ಬುದ್ಧಿವಾದ ಹೇಳಿದ್ದರೂ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಆತನ​ ಸಹೋದರ ಅಶೋಕ್ ತಿಳಿಸಿದ್ದಾರೆ.

ಮೃತ ಉದಯ್​ ತಾಯಿ ಕಲಾವತಿ ಮಾತನಾಡಿ, ಹೆಂಡತಿಯ ಸಾವಿನಿಂದ ಬೇಸರಗೊಂಡಿದ್ದ. ರಾತ್ರಿ ಹೇಳದೆ, ಕೇಳದೆ ಎಲ್ಲೋ ಹೋಗಿದ್ದವನನ್ನು ಹುಡುಕಿ ಕರೆತಂದಿದ್ದೆವು. ಮಲಗುತ್ತೇನೆ‌ಎಂದು ಹೇಳಿ ಮಕ್ಕಳೊಂದಿಗೆ ಹೀಗೆ ಮಾಡಿಕೊಂಡಿದ್ದಾನೆ. ಮಕ್ಕಳನ್ನು ನೋಡಿದರೆ ಬಹಳ ಬೇಸರ ಆಗುತ್ತಿದೆ ಎಂದು ದುಃಖ ವ್ಯಕ್ತಪಡಿಸಿದರು.

ಈ ಬಗ್ಗೆ ಗಾಂಧಿನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಎಸ್​​ಪಿ ಉಮಾಪ್ರಶಾಂತ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಎಸ್​ಪಿ ಉಮಾ ಪ್ರಶಾಂತ್​, ಮೃತ ಉದಯ್​ ತನ್ನ ಹೆಂಡತಿ ಮೃತಪಟ್ಟ ಹಿನ್ನೆಲೆಯಲ್ಲಿ ತೀವ್ರ ನೊಂದಿದ್ದರು. ಪತ್ನಿ ಹೇಮಾ 8 ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಮಕ್ಕಳು ಕೂಡ ತಾಯಿಯ ಬಗ್ಗೆ ಆಗಾಗ್ಗೆ ಕೇಳುತ್ತಿದ್ದರು.

ಹೇಮಾರನ್ನು ಪ್ರೀತಿಸಿ ಮದುವೆಯಾಗಿದ್ದ ಉದಯ್​, ಪತ್ನಿಯ ಅಗಲಿಕೆಯ ಬೇಸರದಲ್ಲಿದ್ದರು. ಉದಯ್​ ತಾಯಿ ಆತನ ಮನೆಗೆ ಹೋಗಿ ನೋಡಿದಾಗ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಗಾಂಧಿನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೊಲೆ ಹಾಗೂ ಅಸಹಜ ಸಾವು ಪ್ರಕರಣಗಳನ್ನು ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಅವರು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ