Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ಡ್ಯಾಂ 6 ಕ್ರಸ್ಟ್‌ ಗೇಟ್‌ಗಳಲ್ಲಿ ದೋಷ, ಆತಂಕದಲ್ಲಿ ರೈತರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್
ಸರ್ಕಾರದ ಬೇಜವಾಬ್ದಾರಿಯಿಂದ ತುಂಗಭದ್ರಾ ಜಲಾಶಯದ 6 ಕ್ರಸ್ಟ್‌ ಗೇಟ್‌ಗಳಲ್ಲಿ ಕಾಣಿಸಿರುವ ದೋಷ ರೈತರನ್ನು ಮತ್ತೆ ಆತಂಕಕ್ಕೆ ದೂಡಿದ್ದು ಕೂಡಲೇ ತುಂಗಭದ್ರಾ ಡ್ಯಾಂ ಉಳಿಸಿ ಎಂದು ಜೆಡಿಎಸ್ ಆಗ್ರಹಪಡಿಸಿದೆ. 

ಡ್ಯಾಂನ 11, 18, 20, 24, 27 ಮತ್ತು 28ನೇ ಕ್ರಸ್ಟ್‌ ಗೇಟುಗಳು ಬಾಗಿದ್ದು, 130 ಟಿಎಂಸಿ ನೀರು ವ್ಯರ್ಥವಾಗಿ ನದಿ ಪಾಲಾಗಿದೆ. ಈ ಸಲವೂ ರೈತರ ಒಂದು ಬೆಳೆಗೆ ಮಾತ್ರ ನೀರು ಸಿಗಲಿದೆ ಎಂದು ಜೆಡಿಎಸ್ ಬೇಸರ ವ್ಯಕ್ತಪಡಿಸಿದೆ.

ಕಳೆದ ಬೇಸಿಗೆಯಲ್ಲಿಯೇ ಸರ್ಕಾರ ಗೇಟ್ ಬದಲಿಸಿದ್ದರೆ ಸಮಸ್ಯೆ ಪರಿಹಾರವಾಗುತ್ತಿತ್ತು. ಈಗ 6 ಗೇಟುಗಳು ಬಾಗಿರುವುದರಿಂದ ತುಂಡಾಗುವ ಅಪಾಯದ ಜೊತೆಗೆ ಜಲಾಶಯಕ್ಕೆ ಆಪತ್ತು ಎದುರಾಗಿದೆ. ಅಂದು ಜಲಾಶಯಕ್ಕೆ ಬಾಗಿನ ಅರ್ಪಿಸಿ, ಎಲ್ಲಾ ಗೇಟ್'ಗಳನ್ನು ಬದಲಿಸುವುದಾಗಿ ಬುರುಡೆ ಭಾಷಣ ಮಾಡಿದ್ದ  ಸಿಎಂ ಸಿದ್ದರಾಮಯ್ಯ ಹಾಗೂ  ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರೇ ಇದೇನಾ ನಿಮ್ಮ ಸರ್ಕಾರದ ರೈತ ಪರ ಕಾಳಜಿ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ವರ್ಷದ ಹಿಂದೆ 19ನೇ ಕ್ರಸ್ಟ್‌ಗೇಟ್ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ಪೋಲಾಗಿತ್ತು. ಆಗ ಜಲಾಶಯದ ಎಲ್ಲಾ ಗೇಟ್‌ಗಳನ್ನು ಬದಲಿಸಬೇಕಿದೆ' ಎಂದು  ಸುರಕ್ಷತಾ ತಜ್ಞರು ವರದಿ ನೀಡಿದ್ದರು. ಆದನ್ನು ನಿರ್ಲಕ್ಷಿಸಿರುವ ದಪ್ಪ ಚರ್ಮದ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಇನ್ನೂ ಕುಂಭಕರ್ಣ ನಿದ್ದೆಯಲ್ಲೇ ಕಾಲಹರಣ ಮಾಡದೆ ತುಂಗಭದ್ರಾ ಉಳಿಸಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ