Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್​ ವಿರುದ್ಧ ಬೇಸರ: ಸಿದ್ಧರಾಮಯ್ಯಗೆ ಸವಾಲು ಹಾಕಿದ ಗೌಡರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಕ್ಕೆ ವಿವಿಧ ಕೈಗಾರಿಕೆಗಳನ್ನು ತಂದು ಒಳ್ಳೆಯದು ಮಾಡಬೇಕು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡರು ಬೇಸರ ವ್ಯಕ್ತಪಡಿಸಿದರು.


ಅವರು ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೈಗಾರಿಕೆಗಳನ್ನು ತರುವುದರ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮತ್ತು ಹೆಚ್​ಎಂಟಿ ಕಾರ್ಖಾನೆ ಪುನಶ್ಚೇತನಕ್ಕೆ ಕುಮಾರಸ್ವಾಮಿ ಶ್ರಮಿಸುತ್ತಿದ್ದಾರೆ. ಅದಕ್ಕೆ ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಹಿಂದೆ ನೀಡಿದ್ದ ಭೂಮಿ ಬಳಕೆ ಮಾಡಿಕೊಳ್ಳುವುದಕ್ಕೆ ಈ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದು ದೇವೇಗೌಡರು ಬೇಸರ ವ್ಯಕ್ತಪಡಿಸಿದರು.

ಮೈಸೂರು ಮಹಾರಾಜರು, ಸರ್ ಎಂ.ವಿಶ್ವೇಶ್ವರಯ್ಯ ಅವರು ಭದ್ರಾವತಿಯಲ್ಲಿ ಕಟ್ಟಿದ ಉಕ್ಕು ಕಾರ್ಖಾನೆ ಉಳಿಸಿಕೊಳ್ಳಲು ಕುಮಾರಸ್ವಾಮಿ ಕಷ್ಟಪಡುತ್ತಿದ್ದಾರೆ. ಅದನ್ನು ಪುನಶ್ಚೇತನ ಮಾಡಬೇಕಾದರೆ ಕಬ್ಬಿಣದ ಅದಿರು ಬೇಕು. ಅದಕ್ಕೂ ರಾಜ್ಯ ಸರ್ಕಾರ ಸಹಕಾರ ಕೊಡುತ್ತಿಲ್ಲ. ಹೀಗಾದರೆ ಹೇಗೆ ರಾಜ್ಯ ಅಭಿವೃದ್ಧಿ ಆಗುತ್ತದೆ? ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ದೇವೇಗೌಡರು ತೀಕ್ಷ್ಣವಾಗಿ ಪ್ರಶ್ನಿಸಿದರು.


ಸಿದ್ಧುಗೆ ಸವಾಲು ಹಾಕಿದ ಗೌಡರು:
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಸಮಾವೇಶ ಮಾಡುತ್ತಿದ್ದಾರೆ ಎಂದು ಪತ್ರಿಕೆಯಲ್ಲಿ ಸುದ್ದಿ ಓದಿದೆ. ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ನೀಡಿರುವ ಹೇಳಿಕೆಯನ್ನು ಕೂಡ ನಾನು ಓದಿದ್ದೇನೆ. ಜನವರಿ
25ರಂದು ಅಹಿಂದ ಸಮಾವೇಶ ಮಾಡುತ್ತಾರಂತೆ. ನಾವು 23ರಂದು ಹಾಸನದಲ್ಲಿ ಸಮಾವೇಶ ಮಾಡುತ್ತೇವೆ ಎಂದು ದೇವೇಗೌಡರು ತಿಳಿಸಿದರು.


ಅಹಿಂದ ವ್ಯಾಖ್ಯಾನ ಏನು?
ಇಡೀ ದೇಶದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಣ್ಣುಮಕ್ಕಳಿಗೆ ಮೀಸಲು ಕೊಟ್ಟವರು ಯಾರು
? ಮುಸ್ಲಿಮರಿಗೂ ಮೀಸಲು ಕೊಟ್ಟವರು ಯಾರು? ಅಹಿಂದ ವ್ಯಾಖ್ಯಾನ ಏನು? ನಾಯಕ ಸಮಾಜಕ್ಕೆ ಮೀಸಲಾತಿ ಕೊಟ್ಟವರು ಯಾರು? ನಾನು ವಸತಿ ಶಾಲೆಗಳನ್ನು ಕೊಟ್ಟೆ. ನಾನು ದೆಹಲಿಗೆ ಹೋದ ಮೇಲೆ ಇದೇ ಸಿದ್ದರಾಮಯ್ಯ ಹಣಕಾಸು, ಅಬಕಾರಿ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿ, ಆಮೇಲೆ ಜೆ.ಹೆಚ್.ಪಟೇಲ್ ಮುಖ್ಯಮಂತ್ರಿ. ನಂತರ ಎಸ್.ಎಂ.ಕೃಷ್ಣ ಬಂದರು ಎಂದು ಗೌಡರು ತಿಳಿಸಿದರು.


ವಸತಿ ಶಾಲೆಗಳ ಕಥೆ ಏನಾಯಿತು? ಸಿದ್ದರಾಮಯ್ಯ ಅವರನ್ನು ಗುರುತಿಸಿದ್ದು ನಾನು ಎಂದು ಹೇಳಲ್ಲ, ಅವರೇ ಹೇಳಿಕೊಳ್ಳಲಿ. ನನ್ನ ಬಗ್ಗೆ ಅವರು ಎಷ್ಟು ಬೇಕಾದರೂ ಕಠಿಣವಾಗಿ ಮಾತನಾಡಲಿ. ಈ ಅಹಿಂದವನ್ನು ಯಾವ ಲೇಬಲ್ ಇಟ್ಟುಕೊಂಡು ಮಾಡಿದಿರಿ? ಒಳಮೀಸಲಾತಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟೆಷ್ಟು ಹೋಗಿದೆ ಎಂದು ಹೇಳಿದರೆ, ನಿಮ್ಮ ಬಜೆಟ್​​ಗಳ ಬಗ್ಗೆ ಮಾತಾಡೋಣವಾ? ಚರ್ಚೆ ಮಾಡೋಣವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ದೇವೇಗೌಡರು ಸವಾಲು ಹಾಕಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಟಿ.ಎನ್.ಜವರಾಯಿ ಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನಪರಿಷತ್ ಮಾಜಿ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ನಗರ ಘಟಕದ ಮಾಜಿ ಅಧ್ಯಕ್ಷ ಪ್ರಕಾಶ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್ ಸೇರಿದಂತೆ ಹಲವು ಮುಖಂಡರು ದೇವೇಗೌಡರು ಜೊತೆ ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ