Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣು ಅಬಲೆಯಲ್ಲ, ಸಬಲೆ, ಸಾಕಷ್ಟು ದಿಟ್ಟ ಮಹಿಳೆಯರು ದೇಶಕ್ಕೆ ಕೊಡಿಗೆ ನೀಡಿದ್ದಾರೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲಿ ಅನೇಕ ಮಹಿಳೆಯರು ಇದ್ದಾರೆ. ಹಾಗಾಗಿ ಹೆಣ್ಣು ಅಬಲೆಯಲ್ಲ. ಸಬಲೆ ಎಂದು ಹಿರಿಯ ನ್ಯಾಯವಾದಿ ಬಿ.ಕೆ. ರಹಮತ್‌ವುಲ್ಲಾ ಹೇಳಿದರು.


ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.

ಪುರಾತನ ಕಾಲದಿಂದಲೂ ಹೆಣ್ಣನ್ನು ಅಬಲೆ ಎಂದು ಬಿಂಬಿಸುತ್ತಲೆ ಬರಲಾಗುತ್ತಿದೆ. ಫಾತಿಮಶೇಖ್, ಕಿತ್ತೂರುರಾಣಿ ಚೆನ್ನಮ್ಮ, ಒನಕೆ ಓಬವ್ವ, ಸಾವಿತ್ರಿ ಬಾಯಿಪುಲೆ ಇವರುಗಳೆಲ್ಲಾ ದಿಟ್ಟ ಮಹಿಳೆಯರು. ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಇನ್ನು ನಿಂತಿಲ್ಲ. ಗರ್ಭದಲ್ಲಿರುವಾಗಲೆ ಹೆಣ್ಣಿನ ಭ್ರೂಣ ಹತ್ಯೆಯಾಗುತ್ತಿದೆ. ಹೆಣ್ಣು ಮನೆಗೆ ಮಾತ್ರ ಸೀಮಿತ ಎನ್ನುವ ತಪ್ಪು ಕಲ್ಪನೆಯನ್ನು ಮನಸ್ಸಿನಿಂದ ತೆಗೆದು ಹಾಕಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಬಡತವನ್ನು ಮುಂದಿಟ್ಟುಕೊಂಡು ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ. ಕಡ್ಡಾಯವಾಗಿ ಶಿಕ್ಷಣ ಕೊಡಿಸಿದಾಗ ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗುತ್ತದೆಂದರು.

ಬಾಲ್ಯ ವಿವಾಹ ಅಕ್ಷಮ್ಯ ಅಪರಾಧ. ಹೆಣ್ಣಿಗೆ ಹದಿನೆಂಟು ವರ್ಷ, ಗಂಡಿಗೆ ೨೧ ವರ್ಷಗಳಾಗಿದ್ದಾಗ ಮಾತ್ರ ವಿವಾಹ ಮಾಡಬಹುದು. ಅಪ್ರಾಪ್ತ ವಯಸ್ಸಿನಲ್ಲಿ ವಿವಾಹ ಮಾಡಿದರೆ ಪೋಷಕರಿಗೂ ಶಿಕ್ಷೆಯಾಗುತ್ತದೆನ್ನುವ ಅರಿವಿರಬೇಕೆಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ ಮಹಿಳೆಯರು ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ನ್ಯೂಯಾರ್ಕ್‌ನಲ್ಲಿ ಚಳುವಳಿ ನಡೆಸಿದ ಫಲವಾಗಿ ಪ್ರತಿ ವರ್ಷವೂ ಮಾ.೮ ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಕುಟುಂಬ ನಿರ್ವಹಣೆ ಜೊತೆ ಮಹಿಳೆ ಹೊರಗಡೆಯೂ ಕೆಲಸ ಮಾಡುತ್ತಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿಯೂ ಮಹಿಳೆ ಸಾಧನೆ ಮಾಡುತ್ತಿದ್ದಾಳೆ. ರಾಜಕಾರಣಿಗಳಾಗಿ, ಅಧಿಕಾರಿಗಳಾಗಿ, ಹೋರಾಟಗಾರ್ತಿಯರಾಗಿಯೂ ಮಹಿಳೆ ಗುರುತಿಸಿಕೊಳ್ಳುತ್ತಿರುವುದರಿಂದ ಹೆಣ್ಣು ಅಬಲೆಯಲ್ಲ. ಸಬಲೆ ಎನ್ನುವುದು ಗೊತ್ತಾಗುತ್ತದೆ ಎಂದರು.

ತಾಯಿ ಗರ್ಭದಲ್ಲಿಯೇ ಹೆಣ್ಣಿನ ಭ್ರೂಣ ಹತ್ಯೆಯಾಗುತ್ತಿರುವುದು ನೋವಿನ ಸಂಗತಿ. ಶ್ರೀಮಂತಿಕೆಯಿಂದ ಯಾರೂ ಸಾಧನೆ ಮಾಡಲು ಆಗುವುದಿಲ್ಲ. ಶಿಕ್ಷಣದಿಂದ ಮಾತ್ರ ಸ್ವಾವಲಂಭಿಯಾಗಿ ಬದುಕಬಹುದು. ಹೆಣ್ಣು-ಗಂಡೆಂಬ ತಾರತಮ್ಯವಿಲ್ಲದೆ ಹೆಣ್ಣಿಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ಪೋಷಕರುಗಳ ಮೇಲಿದೆ. ಬಾಲ್ಯ ವಿವಾಹ ಮಾಡಿದರೆ ಹೆತ್ತವರಿಗೂ ಶಿಕ್ಷೆಯಾಗುತ್ತದೆಂಬ ಎಚ್ಚರಿಕೆ ಪ್ರತಿಯೊಬ್ಬರಲ್ಲಿಯೂ ಇರಬೇಕು. ಮಕ್ಕಳನ್ನು ಮೊಬೈಲ್‌ನಿಂದ ದೂರವಿರಿಸಿ. ಒಂದು ವೇಳೆ ಮೊಬೈಲ್ ಕೊಟ್ಟರು ಅವರ ಚಲನವಲನಗಳ ಕಡೆ ಪೋಷಕರು ನಿಗಾ ವಹಿಸಬೇಕು. ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಂದ ಮಹಿಳೆಯ ಸಬಲೀಕರಣವಾಗುತ್ತಿದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ನೊಂದ ಮಹಿಳೆಯರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡಲಾಗುವುದು. ಯಾವುದೇ ಮಹಿಳೆಗೆ ತೊಂದರೆಯಾಗುತ್ತಿದ್ದಾರೆ. ೧೮೧ ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ಸಹಾಯಕ್ಕೆ ಧಾವಿಸಲಾಗುವುದು ಎಂದು ಹೇಳಿದರು.

ಮಹಿಳಾ ಸೇವಾ ಸಮಾಜದ ಉಪಾಧ್ಯಕ್ಷೆ ಮೋಕ್ಷರುದ್ರಸ್ವಾಮಿ ಮಾತನಾಡಿ ಹೆಣ್ಣು ಎಂದರೆ ಕೇವಲ ಪುರುಷನ ಅಡಿಯಾಳು ಎನ್ನುವ ತಪ್ಪು ಕಲ್ಪನೆ ಸಮಾಜದಲ್ಲಿ ಬೇರೂರಿದೆ. ಇದನ್ನು ಹೋಗಲಾಡಿಸಬೇಕಾದರೆ ಮೊದಲು ಹೆಣ್ಣು ಶಿಕ್ಷಣವಂತಳಾಗಿ ಸಮಾಜದಲ್ಲಿ ಸ್ವಾವಲಂಭಿಯಾಗಿ ಬದುಕುವುದನ್ನು ಕಲಿಯಬೇಕು. ಎಲ್ಲದಕ್ಕೂ ಪುರುಷರನ್ನು ಅವಲಂಭಿಸಿಕೊಂಡಿರಬಾರದು. ಸ್ವ-ಉದ್ಯೋಗದಿಂದ ತನ್ನ ಭವಿಷ್ಯವನ್ನು ತಾನೆ ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಸರ್ಕಾರವೂ ಕೂಡ ಹೆಣ್ಣು ಮಕ್ಕಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಲ್ಲವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಹೆಣ್ಣು ಸೋಮಾರಿಯಾಗಿ ಮನೆಯಲ್ಲಿ ಕುಳಿತುಕೊಳ್ಳುವುದರಿಂದ ಜೀವನದಲ್ಲಿ ಏನನ್ನು ಸಾಧಿಸಲು ಆಗುವುದಿಲ್ಲ. ಕರಕುಶಲ ತರಬೇತಿಗಳನ್ನು ಪಡೆದುಕೊಳ್ಳಿ. ಬಟ್ಟೆ ಹೊಲಿಯುವುದು, ಬುಟ್ಟಿ ಹೆಣೆಯುವುದು, ಅಡಿಕೆ ಪಟ್ಟೆಗಳಿಂದ ತಟ್ಟೆಗಳನ್ನು ತಯಾರಿಸುವುದು ಸೇರಿದಂತೆ ನೂರಾರು ಬಗೆಯ ಕಸೂತಿ ಕೆಲಸಗಳಿವೆ. ಶ್ರದ್ದೆಯಿಂದ ಕಲಿತರೆ ಮನೆಯಲ್ಲಿಯೇ ಕುಳಿತು ಹಣ ಸಂಪಾದಿಸಬಹುದು ಎಂದು ಹೇಳಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ನ್ಯಾಯವಾದಿಗಳಾದ ಪ್ರತಾಪ್‌ಜೋಗಿ, ಬಿ.ಕೆ.ಫೈಜಾನುಲ್ಲಾ, ಪುಷ್ಪ, ಕೆ.ಕೆ.ಎನ್.ಎಸ್.ಎಸ್. ಉಪಾಧ್ಯಕ್ಷ ರಂಗಸ್ವಾಮಿ ಇವರುಗಳು ವೇದಿಕೆಯಲ್ಲಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ