Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣು ಮಕ್ಕಳು ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡಿದರೆ ಸೋಮಾರಿಗಳಾಗುತ್ತಾರೆಯೇ?

Advertisement
ಚಂದ್ರವಳ್ಳಿ ನ್ಯೂಸ್,  ಬೆಂಗಳೂರು :
ರಂಭಾಪುರಿ ಮಠದ ಸ್ವಾಮೀಜಿಗಳು ಗ್ಯಾರಂಟಿ ಯೋಜನೆಗಳಿಂದಾಗಿ ಜನ ಸೋಮಾರಿಗಳಾಗಿದ್ದಾರೆ ಎಂದು ಯಾವ ಹಿನ್ನೆಲೆ ಅಥವಾ ಸಂದರ್ಭದಲ್ಲಿ ಈ ರೀತಿ  ಹೇಳಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ಹೆಣ್ಣು ಮಕ್ಕಳು  ಶಕ್ತಿ ಯೋಜನೆಯಡಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಿದರೆ ಸೋಮಾರಿಗಳಾಗುತ್ತಾರೆಯೇ
? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದರು.

ಕರ್ನಾಟಕದಲ್ಲಿ 7 ಕೋಟಿ ಜನರಿದ್ದು ಅದರ ಅರ್ಧ ಭಾಗವಿರುವ 3.5 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣಿಸಿದರೆ ಹಣ ಉಳಿತಾಯವಾಗುತ್ತದೆ. ಅವರ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ 2000 ರೂ.ಗಳನ್ನು ಒದಗಿಸಿದರೆ ಅವರು ಮಕ್ಕಳನ್ನು ಓದಿಸುತ್ತಾರೆ.

ಇದರಿಂದ ಮಹಿಳೆಯರು ಸಬಲರಾಗುತ್ತಾರೆಯೇ ವಿನಃ ಸೋಮಾರಿ ಆಗಲು ಹೇಗೆ ಸಾಧ್ಯ? ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದಿದ್ದರು.

ಅವರು ಮೇಧಾವಿಗಳಾಗಿದ್ದು, ಅವರು ಹೇಳಿದ್ದನ್ನು ಅಲ್ಲಗಳೆಯಲಾಗುವುದಿಲ್ಲ. ಜಾತಿ ಹೋಗಬೇಕಾದರೆ ಆರ್ಥಿಕವಾಗಿ ಸಬಲರಾಗಲು, ಸಮಾನತೆ ತರಲು ಸಾಮಾಜಿಕ - ಆರ್ಥಿಕ ಶಕ್ತಿ ದೊರಕಬೇಕು. ದೇಶ ಕಂಡ ಮೇಧಾವಿಗಳಲ್ಲೇ ಅಪ್ರತಿಮ ಮೇಧಾವಿಗಳಾದ ಅಂಬೇಡ್ಕರ್ ಅವರು ದೇಶದಲ್ಲಿನ ಅಸಮಾನತೆ ಹೋಗದಿದ್ದರೆ ಪ್ರಜಾಪ್ರಭುತ್ವ ಯಶಸ್ವಿಯಾಗುವುದಿಲ್ಲ. ಸಮಸಮಾಜದ ನಿರ್ಮಾಣಕ್ಕೆ ಜಾತೀಯತೆ, ವರ್ಗ ವ್ಯವಸ್ಥೆ ಹೋಗಬೇಕು ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳು ಸಮಾಜದ ಬಡವರ ಪರಿಸ್ಥಿತಿಯನ್ನು ಉತ್ತಮಪಡಿಸಬಹುದು ಎಂದು ಸಾಕಷ್ಟು ಚರ್ಚೆ ಮಾಡಿ ನಂತರ ನಿರ್ಣಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ