Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆರ್ಯವರ್ಧನ್ ವಿರುದ್ಧ ದೂರು ದಾಖಲು

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಿಂದೂ ಧರ್ಮದಲ್ಲಿ ಸಂಪತ್ತು
, ಸಮೃದ್ಧಿ, ಸೌಂದರ್ಯ ಮತ್ತು ಅದೃಷ್ಟ ದೇವತೆಯಾಗಿರುವ  ಮಹಾಲಕ್ಷ್ಮಿ ಭಕ್ತಿಬಾವದಿಂದ ಪೂಜಿಸುತ್ತಾರೆ.

ಅದರೆ ಐಶ್ವರ್ಯ ದೇವತೆ ಲಕ್ಷ್ಮೀ ಬಗ್ಗೆ ಕೀಳು ಮಟ್ಟದ ಮತ್ತು ಅಶ್ಲೀಲ ಹೇಳಿಕೆ ನೀಡಿರುವ ಆರ್ಯವರ್ಧನ್ ಗುರೂಜಿ ಎಂಬುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀ ರಾಮಸೇನೆ ಕರ್ನಾಟಕ ರಾಜ್ಯದ ಧರ್ಮ ಪ್ರಚಾರಕ ಶ್ರೀನಿವಾಸ ಗುರೂಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಅವರು ಮಾತನಾಡಿ  ಇತ್ತೀಚೆಗೆ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಕನ್ನಡ ಅಪಡೇಟ್ಸ್  ಸೇರಿದಂತೆ ವಿವಿಧ ಪೇಜ್‌ಗಳಲ್ಲಿ ಆರ್ಯವರ್ಧನ್ ಗುರೂಜಿ ಅವರ ವಿಡಿಯೋವೊಂದು ತೀವ್ರ ವಿವಾದ ಸೃಷ್ಟಿಸಿದೆ.

ಈ ವಿಡಿಯೋದಲ್ಲಿ ಗುರೂಜಿ ಅವರು ಹಿಂದೂಗಳ ಆರಾಧ್ಯ ದೇವತೆಯಾದ ಲಕ್ಷ್ಮೀ ದೇವಿಯ ಸ್ವಸ್ಥಾನದ ಬಗ್ಗೆ ಅಸಭ್ಯ, ಆಕ್ಷೇಪಾರ್ಹ ಮತ್ತು ಅಶ್ಲೀಲವಾಗಿ ಮಾತನಾಡಿದ್ದಾರೆ. ನಮ್ಮ ಪವಿತ್ರ ಧರ್ಮ ಶಾಸ್ತ್ರಗಳಲ್ಲಾಗಲಿ, ವೇಧ ಉಪನಿಷತ್ತುಗಳಲ್ಲಾಗಲಿ ಅಥವಾ ಯಾವುದೇ ಪುರಾಣ ಗಳಲ್ಲಾಗಲಿ ಇಂತಹ ಅಶ್ಲೀಲ ಮತ್ತು ಕೀಳುಮಟ್ಟದ ಉಲ್ಲೇಖಗಳು ಎಲ್ಲಿಯೂ ಇಲ್ಲ. ಕೇವಲ ಪ್ರಚಾರಕ್ಕಾಗಿ ಮತ್ತು ಸಾರ್ವ ಜನಿಕರನ್ನು ದಾರಿ ತಪ್ಪಿಸಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ಇವರ ಈ ಹೇಳಿಕೆಯು ಕೋಟ್ಯಂತರ ಹಿಂದೂ ಧರ್ಮೀಯರ ಹಾಗೂ

ದೈವಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆಯುಂಟು ಮಾಡಿದೆ. ಮತ್ತು ಸಮಾಜದಲ್ಲಿ ಸೌಹಾರ್ದತೆಯನ್ನು ಕದಡುವ ಕೃತ್ಯವಾಗಿದೆ. ಆದ್ದರಿಂದ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಪೊಲೀಸರು ತಕ್ಷಣವೇ ಎಫ್‌ಐಆರ್ ದಾಖಲಿಸಿ ಆರ್ಯವರ್ಧನ್ ಗುರೂಜಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಇಂತಹ ಅಸಭ್ಯ ಕಾರ್ಯಕ್ರಮಗಳ ಪ್ರಸಾರಕ್ಕೆ ತಡೆ ಒಡ್ಡಬೇಕು ಎಂದು ಒತ್ತಾಯಿಸಿ, ಉಪವಿಭಾಗದ ಡಿವೈಎಸ್ಪಿ ಹಾಗೂ ಆರಕ್ಷಕ ನಿರೀಕ್ಷಕರಿಗೆ ದೂರನ್ನು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ