ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಮಧ್ಯ ನಡೆದಿರುವ ಆಡಿಯೋ ವೈರಲ್ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ಹೇಳಿಕೆ ನೀಡಿ, ಸಚಿವರಿಗೆ ನೇರವಾಗಿ ಹೇಳಿದರೆ ವಿಚಾರ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಶಾಸಕ ಬಿ.ಆರ್.ಪಾಟೀಲ್ ಮಾಡಿರುವ ಆರೋಪ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಯಾವ ಅರ್ಥದಲ್ಲಿ ಹೇಳಿದ್ದಾರೆ ಅಂತಾ ಗೊತ್ತಿಲ್ಲ. ಯಾರು ಲಂಚ ಕೇಳುತ್ತಿದ್ದಾರೆ ಅವರ ವಿರುದ್ಧ ವಸತಿ ಸಚಿವ ಜಮೀರ್ಗೆ ಬಿ.ಆರ್.ಪಾಟೀಲ್ ದೂರು ಕೊಡಲಿ. ಅವರು ಕ್ರಮ ತೆಗೆದುಕೊಳುತ್ತಾರೆ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.


