ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾರ್ವಜನಿಕರಲ್ಲಿ ಹಣಕಾಸಿನ ಅರಿವು ಮೂಡಿಸುವ ಉದ್ದೇಶದಿಂದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಾಯೋಜಿತ ದೊಡ್ಡಬಳ್ಳಾಪುರದ ಹಣಕಾಸು ಸಾಕ್ಷರತಾ ಕೇಂದ್ರದ ವತಿಯಿಂದ ತೂಬಗೆರೆಯ ಅಂಬೇಡ್ಕರ್ ಭವನದಲ್ಲಿ ಹಣಕಾಸು ಸಾಕ್ಷರತಾ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ಸೇವೆಗಳು, ಆರ್ಥಿಕ ಸಾಕ್ಷರತೆ, ಕೇಂದ್ರ ಸರ್ಕಾರದ ವಿವಿಧ ಹಣಕಾಸು ಯೋಜನೆಗಳು, ಬ್ಯಾಂಕ್ ಖಾತೆ ತೆರೆಯುವ ವಿಧಾನ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳ ಕುರಿತು ಸಾರ್ವಜನಿಕರಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ವಿವೇಕ್ ಸಿಂಗ್,
ಮಾಹಿತಿ ನೀಡಿದರು.
ಸರ್ಕಾರದ ವಿವಿಧ ಹಣಕಾಸು ಯೋಜನೆಗಳ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ಬ್ಯಾಂಕಿಂಗ್ ಸೇವೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಹಾಗೂ ಡಿಜಿಟಲ್ ಹಣಕಾಸು ವಹಿವಾಟುಗಳ ಬಗ್ಗೆ ಅರಿವು ಮೂಡಿಸುವ ಕುರಿತು ತಿಳಿಸಲಾಯಿತು.
ಇದೇ ಸಂದರ್ಭದಲ್ಲಿ ಆನ್ಲೈನ್ ವಂಚನೆ, ಸೈಬರ್ ಅಪರಾಧ, ನಕಲಿ ಕರೆಗಳು, ಅಪರಿಚಿತ ಲಿಂಕ್ಗಳು ಹಾಗೂ ಯುಪಿಐ ಮೂಲಕ ನಡೆಯುವ ಹಣಕಾಸು ವಂಚನೆಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಯಿತು. ಡಿಜಿಟಲ್ ವಹಿವಾಟು ನಡೆಸುವಾಗ ಎಚ್ಚರಿಕೆ ವಹಿಸುವುದು, ಒಟಿಪಿ ಹಾಗೂ ಬ್ಯಾಂಕ್ ಖಾತೆಯ ಗೌಪ್ಯ ಮಾಹಿತಿಯನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳದಿರುವುದು ಸೇರಿದಂತೆ ಸುರಕ್ಷಿತ ಬ್ಯಾಂಕಿಂಗ್ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ರಾಮಕೃಷ್ಣ, ನರಸಂಹ ಮೂರ್ತಿ ವಿಜಯ್ ಕುಮಾರ್, ಟಿ.ವಿ. ಶ್ರೀಧರ್, ಟಿ.ಎಂ. ರಾಮಾಂಜನೇಯ ಸೇರಿದಂತೆ ಗಣ್ಯರು, ಬ್ಯಾಂಕ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.




