Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯ ಧನ ಪಡೆಯಲು ಸುಳ್ಳು ದಾಖಲೆ ಸಲ್ಲಿಸಿದವರ ವಿರುದ್ಧ ಎಫ್ಐಆರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಮದುವೆ ಸಹಾಯಧನ ಪಡೆಯಲು ಸುಳ್ಳು ದಾಖಲೆ ಸಲ್ಲಿಸಿದ ಸತ್ಯಪ್ಪ ಕೆಂಚಪ್ಪ ಹಣಬರಟ್ಟಿ ಸಾ. ಜನತಾ ಪ್ಲಾಟ್ ಮೋದಗಾ ತಾ:ಜಿ ಬೆಳಗಾವಿ ಮತ್ತು ರಾಮು ಸಿದ್ದಪ್ಪ ಶಿಂದೆ ಸಾ. ಸುಳೇಬಾವಿ ತಾಜಿ ಬೆಳಗಾವಿ ಇವರನ್ನು ಪತ್ತೆಹಚ್ಚಿ ಬೆಳಗಾವಿ ನಗರ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗಿರುತ್ತದೆ.


ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಲವು ಕಾರ್ಯಕ್ರಮಗಳನ್ನು ಯೋಜನೆಗಳನ್ನು  ಜಾರಿಗೊಳಿಸಲಾಗಿದ್ದು, ವಿವಿಧ ಸೌಲಭ್ಯಗಳಡಿಯಲ್ಲಿ ಸಹಾಯ ಧನಗಳನ್ನು ನೀಡಲಾಗುತ್ತಿದೆ.

ಈ ಸೌಲಭ್ಯಗಳನ್ನು ಪಡೆಯಲು ಹಾಗೂ ನೋಂದಣಿಯಾಗಲು ನಕಲಿ/ತಿರುಚಿದ/ಸುಳ್ಳು ದಾಖಲೆಗಳನ್ನು ಸಲ್ಲಿಸುವುದು ಶಿಕ್ಷಾರ್ಹ ಅಪರಾಧ.  ಈ ಸಂಬಂಧ ಮಂಡಳಿಯು ಹಲವು ಕ್ರಮಗಳನ್ನು ಕೈಗೊಂಡು ಅನರ್ಹ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಿರುತ್ತದೆ.  ಅರ್ಹವಲ್ಲದ ಸೌಲಭ್ಯದ ಅರ್ಜಿಗಳನ್ನು ಹಾಗೂ ಸುಳ್ಳು ದಾಖಲೆಗಳನ್ನೊಳಗೊಂಡ ಸೌಲಭ್ಯದ ಅರ್ಜಿಗಳನ್ನು ತಿರಸ್ಕರಿಸಿ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಹಾಗೂ ಹಲವು ಬಾರಿ ಕಾರ್ಮಿಕ ಕಾರ್ಡ್‍ನ್ನು ಹಿಂದಿರುಗಿಸಿ ನೋಂದಣಿಯನ್ನು ರದ್ದುಪಡಿಸಿಕೊಳ್ಳುವಂತೆ ಮನವಿಯನ್ನು ಮಾಡಲಾಗಿರುತ್ತದೆ.

ಆದಾಗ್ಯೂ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪರಿಶೀಲನೆಯನ್ನು ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಮಂಡಳಿಯ ಸೌಲಭ್ಯಗಳನ್ನು ಪಡೆಯಲು/ನೋಂದಣಿಯಾಗಲು ನಕಲಿ/ತಿರುಚಿದ/ಸುಳ್ಳು ದಾಖಲೆಗಳನ್ನು ಸಲ್ಲಿಸುವುದು ಶಿಕ್ಷಾರ್ಹ ಅಪರಾಧವೆಂದು ಅವರ ವಿರುದ್ಧ ಇನ್ನೂ ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ